HomeKarnatakaBIG NEWS : ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆ ಶಿವಕುಮಾರ್

BIG NEWS : ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ತೀವ್ರ ಮಂಡಿ ನೋವಿನ ಕಾರಣದಿಂದಾಗಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ತಪಾಸಣೆಗೆ ಒಳಗಾದ ಸಂದರ್ಭದಲ್ಲಿ ಹೃದಯದಲ್ಲಿ ತೊಂದರೆ ಇರುವುದು ಗೊತ್ತಾಗಿದೆ. ತಕ್ಷಣವೇ ಹೃದಯ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಚಿಕಿತ್ಸೆ ಯಶಸ್ವಿಯಾಗಿದ್ದು, ಅವರು ಚೇತರಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular