BIG NEWS: ರಾಜ್ಯಾದ್ಯಂತ ಮಿನಿ ವಿಧಾನಸೌಧಗಳಿಗೆ ‘ಪ್ರಜಾಸೌಧ’ ಎಂದು ಮರುನಾಮಕರಣ: ಸಂಪುಟ ನಿರ್ಧಾರ

ಕಲಬುರಗಿ: ರಾಜ್ಯದಾದ್ಯಂತ ಇರುವ ತಾಲೂಕು ಆಡಳಿತ ಸೌಧ ಹಾಗೂ ಮಿನಿವಿಧಾನಸೌಧಗಳಿಗೆ ‘ಪ್ರಜಾಸೌಧ’ ಎಂದು ಮರುನಾಮಕರಣ ಮಾಡಲಾಗುವುದು. ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ.

ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಿನಿ ವಿಧಾನಸೌಧಗಳನ್ನು ಪ್ರಜಾಸೌಧಗಳೆಂದು ಮರುನಾಮಕರಣ ಮಾಡಲಾಗುವುದು. ಆಡಳಿತಕ್ಕೆ ಮತ್ತಷ್ಟು ವೇಗ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಐದು ದಿನದಲ್ಲಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಸಿ ನೀರು ಸಂಗ್ರಹಣೆ ಮಾಡಿದ್ದೇವೆ. ನೀರು ಉಳಿಸಿದ್ದೇವೆ. ಗಂಗಾ ಪೂಜೆಯ ಜೊತೆಗೆ ಗೇಟ್ ಅಳವಡಿಕೆಗೆ ಶ್ರಮಿಸಿದ 108 ಜನರಿಗೂ ಸನ್ಮಾನ ಇಟ್ಟುಕೊಂಡಿದ್ದೇವೆ. ಸೆ. 22 ರಂದು ತುಂಗಭದ್ರಾ ಜಲಾಶಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಬಸವಕಲ್ಯಾಣದ ಅನುಭವ ಮಂಟಪದಿಂದ ಅಂಜನಾದ್ರಿ ಬೆಟ್ಟದವರೆಗೆ ಎಲ್ಲಾ ಪ್ರವಾಸಿ ತಾಣಗಳ ಪುನರುಜ್ಜೀವನ, ಅಭಿವೃದ್ಧಿ ಮಾಡುತ್ತೇವೆ. ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ವಿಶೇಷ ಅನುದಾನ ಮೀಸಲಿಟ್ಟಿದ್ದೇವೆ. ಎಲ್ಲಾ ಸ್ಮಾರಕಗಳ ರಕ್ಷಣೆಗೆ ಸಂಪುಟ ಸಭೆಯಲ್ಲಿ ಸಮ್ಮತಿ ಸೂಚಿಸಲಾಗಿದೆ. ಮಿನಿ ವಿಧಾನಸೌಧಗಳನ್ನು ಪ್ರಜಾಸೌಧವಾಗಿ ಹೆಸರು ಬದಲಾವಣೆ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read