HomeKarnatakaBIG NEWS : ‘ನಮ್ಮ ರಸ್ತೆʼ- 3 ದಿನಗಳ ಪ್ರದರ್ಶನ ಹಾಗೂ ಕಾರ್ಯಾಗಾರ’ ಉದ್ಘಾಟಿಸಿದ ಡಿಸಿಎಂ...

BIG NEWS : ‘ನಮ್ಮ ರಸ್ತೆʼ- 3 ದಿನಗಳ ಪ್ರದರ್ಶನ ಹಾಗೂ ಕಾರ್ಯಾಗಾರ’ ಉದ್ಘಾಟಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು : ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಇಂದಿನಿಂದ ಆರಂಭವಾದ ʼನಮ್ಮ ರಸ್ತೆʼ- 3 ದಿನಗಳ ಪ್ರದರ್ಶನ ಹಾಗೂ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು.

ಈ ಕಾರ್ಯಕ್ರಮವನ್ನು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಉಪಯೋಗಿಸುವಂತಹ ರಸ್ತೆ, ಪಾದಚಾರಿ ಮಾರ್ಗಗಳನ್ನು ನಾಗರಿಕರ ಸುರಕ್ಷತೆ ದೃಷ್ಟಿಯಲ್ಲಿಟ್ಟುಕೊಂಡು ವಿನ್ಯಾಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರದಲ್ಲಿ ಬಂದಂತಹ ಉತ್ತಮ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡು ಅಭಿವೃದ್ಧಿಗೊಳಿಸಲಾಗುವುದು.

ಈ ವಿಶಿಷ್ಟ ಅಭಿಯಾನವು ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡಲು ಸಾಕಷ್ಟು ಪೂರಕವಾಗಿದೆ. ಇದರಿಂದ ಬೆಂಗಳೂರಿನಲ್ಲಿ ಸಕ್ರಿಯ ಸಾರಿಗೆಯನ್ನು ಉತ್ತೇಜಿಸಲು, ಆರೋಗ್ಯಕರ ಜೀವನಶೈಲಿ ನಡೆಸಲು, ಪಾದಚಾರಿ-ಸ್ನೇಹಿ ಬೀದಿಗಳು, ಸೈಕ್ಲಿಂಗ್ಗಾಗಿಯೇ ಮೀಸಲಾದ ಪ್ರತ್ಯೇಕ ಲೇನ್ಗಳು ಮತ್ತು ಹಸಿರುಮಯವಾದ ಸ್ಥಳಗಳನ್ನು ಸೃಷ್ಟಿಸಲು ಸಹಕಾರಿಯಾಗಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಗರದಲ್ಲಿ ಮೆಟ್ರೋ ಜಾಲ, ಉಪನಗರ ರೈಲು ಸೌಲಭ್ಯಗಳು ಮತ್ತು ಬಸ್ ಸೇವೆಗಳ ತ್ವರಿತ ವಿಸ್ತರಣೆಯೊಂದಿಗೆ ಬೆಂಗಳೂರು ನಿರ್ಣಾಯಕ ಹಂತದಲ್ಲಿದೆ. ಹಾಗಾಗಿ ನಾವೆಲ್ಲರೂ ಸೇರಿ ಬೆಂಗಳೂರನ್ನು ಜಾಗತಿಕವಾಗಿ ಬೆಳೆಸೋಣ ಎಂದು ತಿಳಿಸಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular