HomeLatest Newsಜಾಹೀರಾತಿನಲ್ಲಿ ಡಿಸಿಎಂ ಜಿ.ಪರಮೇಶ್ವರ್ ಫೋಟೋ ಮಿಸ್ಸಿಂಗ್ : ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ !

ಜಾಹೀರಾತಿನಲ್ಲಿ ಡಿಸಿಎಂ ಜಿ.ಪರಮೇಶ್ವರ್ ಫೋಟೋ ಮಿಸ್ಸಿಂಗ್ : ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ !

ಬೆಂಗಳೂರು: ರಾಜ್ಯ ಸರ್ಕಾರದ ಜಾಹೀರಾತುಗಳಲ್ಲಿ ದಲಿತ ನಾಯಕರ ಭಾವಚಿತ್ರಗಳನ್ನು ಕೈಬಿಡಲಾಗುತ್ತಿದೆ ಎಂದು ಆರೋಪಿಸಿರುವ ಜೆಡಿಎಸ್, ಈ ಮೂಲಕ ಕಾಂಗ್ರೆಸ್ ಪಕ್ಷವು ದಲಿತರನ್ನು ಕೇವಲ ‘ವೋಟ್ ಬ್ಯಾಂಕ್’ ಆಗಿ ಬಳಸಿಕೊಳ್ಳುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹೊರಡಿಸಿದ್ದ ದೇವರಾಜ ಅರಸು ಅವರ ಕಾರ್ಯಕ್ರಮದ ಜಾಹೀರಾತಿನಲ್ಲಿ, ಹಾಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಭಾವಚಿತ್ರವನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.ಜಾಹೀರಾತಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಭಾವಚಿತ್ರವನ್ನು ಮಾತ್ರ ಪ್ರಮುಖವಾಗಿ ಪ್ರದರ್ಶಿಸುವ ಮೂಲಕ ‘ಏಕಸ್ವಾಮ್ಯ’ ಮೆರೆದಿದ್ದಾರೆ ಎಂದು ಟೀಕಿಸಲಾಗಿದೆ.”ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವ ಕಾಂಗ್ರೆಸ್, ಅಧಿಕಾರದಲ್ಲಿದ್ದಾಗ ದಲಿತ ನಾಯಕರಿಗೆ ನೀಡುವ ಗೌರವ ಇದೇನಾ?” ಎಂದು ಜೆಡಿಎಸ್ ಪ್ರಶ್ನಿಸಿದೆ. 2025 ಮತ್ತು 2026ರಲ್ಲಿ ದಲಿತರಿಗೆ ನೀಡುತ್ತಿರುವ ಮಲತಾಯಿ ಧೋರಣೆಯನ್ನು ಜನತೆ ಗಮನಿಸುತ್ತಿದ್ದಾರೆ ಎಂದು ಎಚ್ಚರಿಸಿದೆ.

ಜೆಡಿಎಸ್ ಟ್ವೀಟ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಬಿಗಿಯುವ @INCKarnatakaನ ಅಸಲಿ ‘ನ್ಯಾಯ’ ಪತ್ರಿಕೆಗಳಲ್ಲಿ ಸಾಬೀತಾಗಿದೆ! ಜಾಹೀರಾತುಗಳನ್ನು ಗಮನಿಸಿ. ತಾವಿದ್ದಾಗ ಫೋಟೋ ಕಡ್ಡಾಯ, ದಲಿತ ನಾಯಕ ಡಿಸಿಎಂ ಆದಾಗ ಫೋಟೋಗೆ ಜಾಗವಿಲ್ಲವೇ ಮುಖ್ಯಮಂತ್ರಿಗಳೇ? ಹಿಂದುಳಿದ ಹಾಗೂ ದಲಿತ ವರ್ಗಗಳ ಪರವಾಗಿ ಬದುಕಿದ ದೇವರಾಜ ಅರಸು ಅವರ ಕಾರ್ಯಕ್ರಮದ ಜಾಹೀರಾತಿನಲ್ಲೇ, ಹಾಲಿ ಉಪಮುಖ್ಯಮಂತ್ರಿ ದಲಿತ ನಾಯಕ @DrParameshwara ಅವರ ಭಾವಚಿತ್ರವನ್ನು ಕೈಬಿಟ್ಟು ಮುಖ್ಯಮಂತ್ರಿ @DKShivakumar ಅವರು ತಮ್ಮ ಏಕಸ್ವಾಮ್ಯ ಪ್ರದರ್ಶಿಸಿದ್ದಾರೆ. 2025ರಲ್ಲಿ ತಮಗೊಂದು ನ್ಯಾಯ, 2026ರಲ್ಲಿ ದಲಿತರಿಗೊಂದು ನ್ಯಾಯವೇ? ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಾಹೀರಾತಿನಲ್ಲೇ ದಲಿತ ನಾಯಕರಿಗೆ ಈ ಮಟ್ಟದ ನಿರ್ಲಕ್ಷ್ಯವೇ? ದಲಿತರನ್ನು ಕೇವಲ ವೋಟ್ ಬ್ಯಾಂಕ್ ಮಾಡಿಕೊಂಡ ಕಾಂಗ್ರೆಸ್‌ನ ಅಹಂಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೆಡಿಎಸ್ ಕಿಡಿಕಾರಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular