HomeKarnatakaದೇವಾಲಯಗಳ ಹೆಸರಿಗೆ ಭೂಮಿ ಖರೀದಿ, ಹುಂಡಿ ಹಣ ದುರ್ಬಳಕೆ ತಡೆಗೆ ಕ್ರಮಕ್ಕೆ ಡಿಸಿಎಂ ಸೂಚನೆ

ದೇವಾಲಯಗಳ ಹೆಸರಿಗೆ ಭೂಮಿ ಖರೀದಿ, ಹುಂಡಿ ಹಣ ದುರ್ಬಳಕೆ ತಡೆಗೆ ಕ್ರಮಕ್ಕೆ ಡಿಸಿಎಂ ಸೂಚನೆ

ಬೆಂಗಳೂರು: ವಿಧಾನಸೌಧದಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸಭೆ ನಡೆಸಲಾಗಿದೆ.

ಧಾರ್ಮಿಕ ಪರಿಷತ್ ಸದಸ್ಯರೊಂದಿಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಚರ್ಚೆ ನಡೆಸಿದ್ದಾರೆ. ದೇವಸ್ಥಾನಗಳಲ್ಲಿ ಸಾಕಷ್ಟು ಹಣವಿದೆ, ಭೂಮಿ ಖರೀದಿಸಿ ಎಂದು ತಿಳಿಸಿದ್ದಾರೆ. ಎ ಮತ್ತು ಬಿ ವರ್ಗದ ದೇವಾಲಯಗಳ ಹೆಸರಿಗೆ ಭೂಮಿ ಖರೀದಿಸಲು ಸೂಚನೆ ನೀಡಿದ್ದಾರೆ. ಈ ಆಸ್ತಿಯು ಶಾಶ್ವತವಾಗಿ ದೇವಸ್ಥಾನಕ್ಕೆ ಉಳಿಯುತ್ತದೆ. ಭಕ್ತರಿಗೆ ಮೂಲ ಸೌಕರ್ಯ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ದೇವಾಲಯದ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ನೆರವಾಗುತ್ತದೆ ಎಂದು ಹೇಳಿದ್ದಾರೆ.

ದೇವಸ್ಥಾನಗಳ ಹುಂಡಿ ಹಣ ದುರ್ಬಳಕೆ ತಡೆಗೆ ಕ್ರಮ ಕೈಗೊಳ್ಳಬೇಕಿದೆ. ಸಿಸಿಟಿವಿ ಅಳವಡಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಇದನ್ನು ಆಗಸ್ಟ್ ಕೊನೆಯ ವೇಳೆಗೆ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular