HomeLatest NewsBIG NEWS: ಸಿಎಂ ಬದಲಾವಣೆ ಬೆನ್ನಲ್ಲೇ ನಾಲ್ವರಿಗೆ ಡಿಸಿಎಂ ಸ್ಥಾನದ ಬಗ್ಗೆ ಚರ್ಚೆ: ಕೆಪಿಸಿಸಿಗೂ ನೂತನ...

BIG NEWS: ಸಿಎಂ ಬದಲಾವಣೆ ಬೆನ್ನಲ್ಲೇ ನಾಲ್ವರಿಗೆ ಡಿಸಿಎಂ ಸ್ಥಾನದ ಬಗ್ಗೆ ಚರ್ಚೆ: ಕೆಪಿಸಿಸಿಗೂ ನೂತನ ಸಾರಥಿ ನೇಮಕ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಮೇಜರ್ ಸರ್ಜರಿಗೆ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಬಳಿಕ ನೂತನ ಸಿಎಂ ಆಯ್ಕೆಯಾಗಲಿದೆ. ಇದರ ಬೆನ್ನಲ್ಲೇ ನಾಲ್ವರಿಗೆ ಡಿಸಿಎಂ ಸ್ಥಾನ ನೀಡುವ ಬಗ್ಗೆಯೂ ಚರ್ಚೆಗಳು ಆರಂಭವಾಗಿದೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಬದಲಾಗಲಿದ್ದು, ನೂತನ ಸಾರಥಿ ನೇಮಕವಾಗಲಿದೆ.

ನೂತನ ಮುಖ್ಯಮಂತ್ರಿಯ ಆಯ್ಕೆ ಜೊತೆಗೆ ನಾಲ್ವರಿಗೆ ಡಿಸಿಎಂ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್​​ ಮಟ್ಟದಲ್ಲಿ ಚರ್ಚೆ ನಡೆದಿದೆ. ಜಾತಿ ಸಮೀಕರಣ ಆಧರಿಸಿ ನಾಲ್ವರಿಗೆ ಪ್ರಾತಿನಿಧ್ಯ ನೀಡುವ ಮಾತುಗಳು ಕೇಳಿಬಂದಿವೆ. ಒಬಿಸಿ, ದಲಿತ, ಮುಸ್ಲಿಂ ಅಥವಾ ಅಲ್ಪಸಂಖ್ಯಾತ ಮತ್ತು ಲಿಂಗಾಯತ ಕೋಟಾದಡಿಯಲ್ಲಿ ನಾಲ್ವರನ್ನು ಡಿಸಿಎಂ ಹುದ್ದೆಗೆ ನೇಮಕ ಮಾಅಡುವ ಸಾಧ್ಯತೆ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಲಿತ ಕೋಟಾದಲ್ಲಿ ಹಾಲಿ ಗೃಹ ಸಚಿವ ಪರಮೇಶ್ವರ್ ಅಥವಾ ಸಚಿವ ಪ್ರಿಯಾಂಕ್​​ ಖರ್ಗೆ ಡಿಸಿಎಂ ಆಗುವ ಸಾಧ್ಯತೆ ಇದೆ. ಒಬಿಸಿ ಕೋಟಾದಲ್ಲಿ ಯತೀಂದ್ರಗೆ ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗಿದೆ. ಇನ್ನು ಮುಸ್ಲಿಂ ಕೋಟಾದಲ್ಲಿ ಹಾಲಿ ಸಚಿವ ಜಮೀರ್ ಅಹ್ಮದ್ ಅಥವಾ ಸದ್ಯ ವಿಧಾನ ಸಭೆ ಸ್ಪೀಕರ್​​ ಆಗಿರುವ ಯು.ಟಿ. ಖಾದರ್​ ಅವರಿಗೆ ಹೈಕಮಾಂಡ್​​ ಮಣೆ ಹಾಕುವ ಸಾಧ್ಯತೆ ಇದೆ. ಲಿಂಗಾಯತ ಕೋಟಾದಲ್ಲಿ ಈಶ್ವರ್ ಖಂಡ್ರೆ ಮತ್ತು ಎಂ.ಬಿ.ಪಾಟೀಲ್ ರೇಸ್​​ನಲ್ಲಿದ್ದಾರೆ, ಅಲ್ಪಸಂಖ್ಯಾತ ಕೋಟಾದಲ್ಲಿ ಕೆ.ಜೆ.ಜಾರ್ಜ್​ಗೆ ಡಿಸಿಎಂ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಲಲಾಗುತ್ತಿದೆ.

ಇನ್ನು ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್​​ ಅವರ ಆಯ್ಕೆ ಬಹುತೇಕ ಖಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಲಿದ್ದಾರೆ. ತೆರವಾದ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲಾಗುತ್ತದೆ. ಸಿಎಂ ಘೋಷಣೆಯ ಜೊತೆ ಜೊತೆಗೆ ಕೆಪಿಸಿಸಿಗೂ ನೂತನ ಅಧ್ಯಕ್ಷರನ್ನು ಹೈಕಮಾಂಡ್ ಘೋಷಿಸಲಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಈಗಾಗಲೇ ಸಚಿವ ಸತೀಶ್​​ ಜಾರಕಿಹೊಳಿ ಕಣ್ಣಿಟ್ಟಿದ್ದು, ಈ ಸಂಬಂಧ ಕೆಲ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ಆದರೆ ಈ ಬಗ್ಗೆ ಹೈಕಮಾಂಡ್​ ಯಾವ ನಿರ್ಧಾಅರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular