HomeKarnatakaಕನ್ನಡಿಗ ಅಧಿಕಾರಿಗಳ ಮೇಲೆ ಹೊರ ರಾಜ್ಯದಿಂದ ಬಂದ ಪೊಲೀಸ್ ಅಧಿಕಾರಿಗಳ ದರ್ಪ, ದೌರ್ಜನ್ಯ: ಡಿಜಿ ಮತ್ತು...

ಕನ್ನಡಿಗ ಅಧಿಕಾರಿಗಳ ಮೇಲೆ ಹೊರ ರಾಜ್ಯದಿಂದ ಬಂದ ಪೊಲೀಸ್ ಅಧಿಕಾರಿಗಳ ದರ್ಪ, ದೌರ್ಜನ್ಯ: ಡಿಜಿ ಮತ್ತು ಐಜಿಪಿಗೆ ಪತ್ರ ಬರೆದು ದೂರು

ಬೆಂಗಳೂರು: ಕನ್ನಡಿಗ ಪೊಲೀಸ್ ಅಧಿಕಾರಿಗಳ ಮೇಲೆ ಹೊರ ರಾಜ್ಯದಿಂದ ಬಂದಿರುವ ಪೊಲೀಸ್ ಅಧಿಕಾರಿಗಳು ದರ್ಪ, ದೌರ್ಜನ್ಯ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕೇಳಿಬಂದಿದೆ.

ಡಿಸಿಆರ್‌ಇ ಎಸ್‌ಪಿ ಕಾಶಿ ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ಪತ್ರ ಬರೆದಿದ್ದಾರೆ. ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ನೇರವಾಗಿ ಆರೋಪಿಸಿರುವ ಅವರು, ಕೆಳಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಿರುಕುಳ ನೀಡಲಾಗುತ್ತಿದೆ. ಹೊರರಾಜ್ಯದಿಂದ ಬಂದಿರುವ ಐಪಿಎಸ್ ಅಧಿಕಾರಿಗಳು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸುಳ್ಳು ಕಾರಣಗಳನ್ನು ಹೇಳಿ ಮೆಮೊ ನೀಡುವುದು ಅಥವಾ ಇನ್ನಿತರ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಸಮ್ಮುಖದಲ್ಲಿ ಈ ಕುರಿತು ಮುಕ್ತವಾಗಿ ಮಾತನಾಡಲು ಅವಕಾಶ ನೀಡುವಂತೆ ಮನವಿ ಮಾಡಿರುವ ಅವರು, ಕೇವಲ 30 ನಿಮಿಷಗಳಲ್ಲಿ ಎಲ್ಲ ಕರ್ಮಕಾಂಡಗಳನ್ನು ಬಿಚ್ಚಿಡುವುದಾಗಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular