ಮೃತದೇಹಗಳ ರಹಸ್ಯ ವಿಲೇವಾರಿ: ಧರ್ಮಸ್ಥಳ ಠಾಣೆಯಲ್ಲಿ FIR ದಾಖಲು

ಮಂಗಳೂರು: ಮೃತದೇಹಗಳನ್ನು ತಾನು ರಹಸ್ಯವಾಗಿ ವಿಲೇವಾರಿ ಮಾಡಿದ್ದಾಗಿ ವ್ಯಕ್ತಿಯೊಬ್ಬರು ವಕೀಲರ ಮೂಲಕ ದೂರು ನೀಡಿದ್ದು, ಈ ಬಗ್ಗೆ ಧರ್ಮಸ್ಥಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳ ಗ್ರಾಮದಲ್ಲಿ ಹಿಂದಿನಿಂದ ಕೆಲ ಅಪರಾಧ ಕೃತ್ಯಗಳು ನಡೆದಿದ್ದು, ದೂರುದಾರರಿಗೆ ಜೀವಬೆದರಿಕೆಯೊಡ್ಡಿ, ಸದ್ರಿ ಅಪರಾಧ ಕೃತ್ಯಗಳ ಮೃತದೇಹಗಳನ್ನು ದೂರುದಾರರ ಮೂಲಕ ರಹಸ್ಯವಾಗಿ ವಿಲೇವಾರಿ ಮಾಡಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಹಲವಾರು ಮೃತದೇಹಗಳನ್ನು ದೂರುದಾರರು ವಿಲೇವಾರಿ ಮಾಡಿದ್ದು, ಪ್ರಸ್ತುತ ದೂರುದಾರರಿಗೆ ಪಾಪಪ್ರಜ್ಞೆ ಕಾಡುತ್ತಿರುವುದರಿಂದ ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕ ರಕ್ಷಣೆ ದೊರೆತ ಕೂಡಲೇ ಈ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಗಳನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರುಗೆ ತೋರಿಸುವುದಾಗಿ ಪೊಲೀಸ್ ಅಧೀಕ್ಷಕರ ಕಚೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ಬಗ್ಗೆ ಕೋರ್ಟ್ ನಿಂದ ಅಗತ್ಯ ಅನುಮತಿ ಪಡೆದು ಧರ್ಮಸ್ಥಳ ಠಾಣೆಯಲ್ಲಿ ಬಿಎನ್ ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ದೂರುದಾರರು ತನ್ನ ಹೆಸರು ಹಾಗೂ ಮಾಹಿತಿಯನ್ನು ಗೌಪ್ಯವಾಗಿಡುವಂತೆ ವಿನಂತಿಸಿರುವ ಹಿನ್ನೆಲೆಯಲ್ಲಿ ದೂರುದಾರರ ಮಾಹಿತಿ ನೀಡಲಾಗಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read