HomeKarnatakaSHOCKING: ತಲೆ ಮೇಲೆ ಎಳನೀರು ಬಿದ್ದು ರೈತ ಸಾವು

SHOCKING: ತಲೆ ಮೇಲೆ ಎಳನೀರು ಬಿದ್ದು ರೈತ ಸಾವು

ಮಂಗಳೂರು: ತಲೆ ಮೇಲೆ ಎಳನೀರು ಬಿದ್ದು ರೈತ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಂಬಾರುವಿನ ಕಾಪಿನಡ್ಕದಲ್ಲಿ ನಡೆದಿದೆ.

ಪ್ರಗತಿಪರ ಕೃಷಿಕ ಸತೀಶ್ ರಾವ್(58) ಮೃತಪಟ್ಟವರು ಎಂದು ಹೇಳಲಾಗಿದೆ. ಬುಧವಾರ ತೋಟದಲ್ಲಿ ಎಳನೀರು ಕೊಯ್ಲು ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೋಟಿಯಲ್ಲಿ ಎಳನೀರು ಕೊಯ್ಯುವಾಗ ತಲೆ ಮೇಲೆ ಬಿದ್ದು, ಸತೀಶ್ ರಾವ್ ಅವರ ತಲೆ ಹಾಗೂ ಕುತ್ತಿಗೆಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular