HomeKarnatakaಧರ್ಮಸ್ಥಳಕ್ಕೆ ಹೊರಟಿದ್ದ ನಿವೃತ್ತ ಪೊಲೀಸ್ ಸಿಬ್ಬಂದಿ ಬಸ್ ನಿಲ್ದಾಣದಲ್ಲೇ ಶವವಾಗಿ ಪತ್ತೆ

ಧರ್ಮಸ್ಥಳಕ್ಕೆ ಹೊರಟಿದ್ದ ನಿವೃತ್ತ ಪೊಲೀಸ್ ಸಿಬ್ಬಂದಿ ಬಸ್ ನಿಲ್ದಾಣದಲ್ಲೇ ಶವವಾಗಿ ಪತ್ತೆ

ಬೆಂಗಳೂರು ನಗರದಲ್ಲಿ ನಿವೃತ್ತ ಪೊಲೀಸ್ ಸಿಬ್ಬಂದಿ ಶವವಾಗಿ ಪತ್ತೆಯಾಗಿದ್ದಾರೆ. ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮುನಿಆಂಜನೇಯ(65) ಅವರ ಶವ ಪತ್ತೆಯಾಗಿದೆ.

ದೊಡ್ಡಬಳ್ಳಾಪುರದ ಮದುರಹೊಸಹಳ್ಳಿ ನಿವಾಸಿಯಾಗಿರುವ ಮುನಿಆಂಜನೇಯ ಗೆಳೆಯರ ಜೊತೆಗೆ ಧರ್ಮಸ್ಥಳಕ್ಕೆ ಹೊರಟಿದ್ದರು. ಅವರು ನಿನ್ನೆ ಮದ್ಯಾಹ್ನ ಎರಡು ಗಂಟೆಗೆ ಮನೆಯಿಂದ ತೆರಳಿದ್ದರು. ಇಂದು ಬೆಳಗಿನ ಜಾವ ಮೂರು ಗಂಟೆಗೆ ಮುನಿಆಂಜನೇಯ ಶವವಾಗಿ ಪತ್ತೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅವರು ಸಾವನ್ನಪ್ಪಿದ್ದಾರೆ. ಅವರ ಬಳಿ ಇದ್ದ ನಗದು, ಚಿನ್ನಾಭರಣ ನಾಪತ್ತೆಯಾಗಿದೆ. ನಿವೃತ್ತ ಪೊಲೀಸ್ ಸಿಬ್ಬಂದಿ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular