ನಾಳೆಯೊಳಗೆ ಡೀಸೆಲ್ ದರ ಇಳಿಕೆಗೆ ಗಡುವು, ಇಲ್ಲದಿದ್ದರೆ ಲಾರಿ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ಡೀಸೆಲ್ ಮೇಲಿನ ದರ ಏರಿಕೆಯನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕೆಂದು ಲಾರಿ ಮಾಲೀಕರು ಆಗ್ರಹಿಸಿದ್ದಾರೆ.

ಶನಿವಾರದೊಳಗೆ ನಿರ್ಧಾರ ಪ್ರಕಟಿಸದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡುವ ರಾಜ್ಯ ಸರ್ಕಾರದ ಕ್ರಮದಿಂದ ಪ್ರತಿ ಲೀಟರ್ ಡೀಸೆಲ್ ಬೆಲೆ 2 ರೂಪಾಯಿಯಷ್ಟು ಏರಿಕೆಯಾಗಿದೆ.

ಅಲ್ಲದೆ, ಕಳೆದ ಜೂನ್ ನಲ್ಲಿಯೂ ತೆರಿಗೆ ಹೆಚ್ಚಳದಿಂದ ಡೀಸೆಲ್ ಬೆಲೆ 1.50 ರೂ. ಹೆಚ್ಚಳವಾಗಿತ್ತು. ಈ ಮೂಲಕ ಕಳೆದ ಒಂದು ವರ್ಷದಿಂದ ಡೀಸೆಲ್ ಬೆಲೆ 3.50 ರೂ. ಹೆಚ್ಚಳವಾದಂತಾಗಿದೆ. ಹೀಗಾಗಿ ಹೆಚ್ಚಳ ಮಾಡಿರುವ ದರವನ್ನು ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಲಾಗಿದೆ.

ಕೂಡಲೇ ದರ ಏರಿಕೆ ಹಿಂಪಡೆಯದಿದ್ದರೆ ಮುಷ್ಕರ ನಡೆಸುವುದಾಗಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘ ಒತ್ತಾಯಿಸಿದೆ. ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಡೀಸೆಲ್ ಬೆಲೆ ಕಡಿಮೆ ಇದೆ ಎಂಬ ಕಾರಣ ಮುಂದಿಟ್ಟುಕೊಂಡು ದರ ಹೆಚ್ಚಿಸಲಾಗಿದೆ. ಇದು ಲಾರಿ ಮಾಲೀಕರ ಮೇಲೆ ಭಾರಿ ಹೊರೆ ಹಾಕಿದಂತಾಗಿದೆ ಎಂದು ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read