ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ರಾಜ್ಯದ ವಿವಿಧ ವೃತ್ತಿಪರ ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸುವ PGCET ಪರೀಕ್ಷೆಯ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿದೆ.
ಎಂಬಿಎ (MBA), ಎಂಸಿಎ (MCA), ಎಂಇ (ME), ಎಂ.ಟೆಕ್ (M.Tech) ಮತ್ತು ಎಂ.ಆರ್ಕಿಟೆಕ್ಚರ್ (M.Arch) ಕೋರ್ಸ್ಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 30 ರವರೆಗೆ ಅವಕಾಶ ನೀಡಲಾಗಿದೆ.ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ನಿಗದಿತ ಶುಲ್ಕವನ್ನು ಪಾವತಿಸಲು ಮೇ 5 ಕೊನೆಯ ದಿನವಾಗಿದೆ.ಅನೇಕ ಅಭ್ಯರ್ಥಿಗಳ ಮನವಿಯ ಮೇರೆಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.ಇದೇ ಕೊನೆಯ ಅವಕಾಶವಾಗಿದ್ದು, ಮತ್ತೆ ದಿನಾಂಕ ವಿಸ್ತರಣೆ ಮಾಡುವುದಿಲ್ಲ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ. ಆದ್ದರಿಂದ ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
#PGCET-26: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 30ರವರೆಗೆ ಮತ್ತೊಮ್ಮೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಮೇ 5 ಕೊನೆ ದಿನ. ಅಭ್ಯರ್ಥಿಗಳ ಕೋರಿಕೆ ಮೇಲೆ ದಿನಾಂಕ ವಿಸ್ತರಿಸಿದ್ದು, ಪುನಃ ಮುಂದೂಡುವುದಿಲ್ಲ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

