HomeKarnatakaಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ವಿಧಿವಶ

ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ವಿಧಿವಶ

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ, ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ವಿಧಿವಶರಾಗಿದ್ದಾರೆ.

ಅನಾರೋಗ್ಯದ ಕಾರಣ ಅವರು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾಪು ಸಿದ್ದಲಿಂಗ ಸ್ವಾಮಿ ಕಾರ್ಯನಿರ್ವಹಿಸಿದ್ದರು. ಈ ಹಿಂದೆ ಸಿದ್ದರಾಮಯ್ಯ ಅವರ ಎದುರು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೆಜೆಪಿಯಿಂದ ಕಾಪು ಸಿದ್ದಲಿಂಗ ಸ್ವಾಮಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ತಿಳಿದ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಂಸದ ವಿ. ಸೋಮಣ್ಣ ಮೈಸೂರಿಗೆ ಆಗಮಿಸಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. 2008ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅವರ ವೈಯಕ್ತಿಕ ಕಾರ್ಯದರ್ಶಿಯಾಗಿ ಕಾಪು ಸಿದ್ದಲಿಂಗ ಸ್ವಾಮಿ ಕಾರ್ಯ ನಿರ್ವಹಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಸಂಜೆ ಕಾರ್ಯ ಗ್ರಾಮದಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ. ಅವರ ನಿಧನಕ್ಕೆ ನಾಯಕರು ಕಂಬನಿ ಮಿಡಿದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular