HomeKarnatakaಬಯಲಾಯ್ತು ಒಂದೇ ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣದ ಸಾವಿನ ರಹಸ್ಯ…?

ಬಯಲಾಯ್ತು ಒಂದೇ ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣದ ಸಾವಿನ ರಹಸ್ಯ…?

ಚಿತ್ರದುರ್ಗ: ಚಿತ್ರದುರ್ಗದ ಮನೆಯೊಂದರಲ್ಲಿ ಐವರ ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ರಿಪೋರ್ಟ್ ಚಿತ್ರದುರ್ಗ ಪೊಲೀಸರ ಕೈ ಸೇರಿದೆ.

ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಬಗ್ಗೆ ವರದಿಯಲ್ಲಿ ಉಲ್ಲೇಖವಿದೆ ಎಂದು ಹೇಳಲಾಗಿದೆ. 2023 ಡಿಸೆಂಬರ್ 28ರಂದು ಐವರ ಅಸ್ಥಿಪಂಜರ ಪತ್ತೆಯಾಗಿತ್ತು. ಚಿತ್ರದುರ್ಗದ ಜಗನ್ನಾಥ ರೆಡ್ಡಿ ಅವರ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆಯಾಗಿದ್ದವು. ಜಗನ್ನಾಥ ರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣಾರೆಡ್ಡಿ ಮತ್ತು ನರೇಂದ್ರ ರೆಡ್ಡಿ ಅವರ ಅಸ್ಥಿಪಂಜರ ಪತ್ತೆಯಾಗಿದ್ದವು.

ದೇಶಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ರಿಪೋರ್ಟ್ ಪೊಲೀಸರ ಕೈ ಸೇರಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular