HomeLatest Newsವಸತಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರ ಸಾವು: ತನಿಖೆಗೆ ಕ್ರೈಸ್ ಆದೇಶ

ವಸತಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರ ಸಾವು: ತನಿಖೆಗೆ ಕ್ರೈಸ್ ಆದೇಶ

ಚಿಕ್ಕಮಗಳೂರು: ಕೊಪ್ಪ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಬ್ಬರು ಬಾಲಕಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(ಕ್ರೈಸ್) ತನಿಖೆಗೆ ಆದೇಶಿಸಿದೆ.

ನಿವೃತ್ತ ನ್ಯಾಯಾಧೀಶರಾದ ಎಸ್. ಶೋಭಾ ಅವರನ್ನು ನೇಮಕ ಮಾಡಿ ಆದೇಶಿಸಿರುವ ಕ್ರೈಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಅಮಾನತು ಮಾಡಿದೆ.

2025ರ ಜೂನ್ 29ರಂದು ವಸತಿ ಶಾಲೆಯ ಸ್ನಾನದ ಕೊಠಡಿಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಾವಿನ ಕುರಿತಾಗಿ ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ವಿವಿಧ ಸಂಘಟನೆಗಳ ಮುಖಂಡರು ಮತ್ತು ಸ್ಥಳೀಯರು ಕೊಪ್ಪದಲ್ಲಿ ಪ್ರತಿಭಟನೆ ನಡೆಸಿ ಪ್ರಾಂಶುಪಾಲರು ಮತ್ತು ನಿಲಯ ಪಾಲಕರ ಅಮಾನತಿಗೆ ಒತ್ತಾಯಿಸಿದ್ದರು. ಅಲ್ಲದೇ ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023ರ ಜುಲೈ 27ರಂದು ಇದೇ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಎರಡೂ ಪ್ರಕರಣಗಳ ತನಿಖೆ ನಡೆಸಲು ಆದೇಶಿಸಿದೆ.

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ಎಸ್. ಶೋಭಾ ಅವರನ್ನು ತನಿಖಾಧಿಕಾರಿಯಾಗಿ, ಜಿಲ್ಲಾ ಸಮನ್ವಯಾಧಿಕಾರಿ ಕೆ.ಪಿ. ಶೈಲಾ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಒಂದು ತಿಂಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕ್ರೈಸ್ ಕಾರ್ಯ ನಿರ್ವಾಹಕ ನಿರ್ದೇಶಕ ಪಿ.ಎಸ್. ಕಾಂತರಾಜು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಪ್ರಾಂಶುಪಾಲರಾದ ರಜಿನಿ ಮತ್ತು ನಿಲಯ ಪಾಲಕ ಸುಂದರ ನಾಯ್ಕ್ ಅವರನ್ನು ಅಮಾನತು ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular