ವಿಚಾರಣಾಧೀನ ಕೈದಿ ಸಾವು: ಪೊಲೀಸರಿಂದ ಹಲ್ಲೆ ಬಗ್ಗೆ ನ್ಯಾಯಾಧೀಶರ ಎದುರು ಕುಟುಂಬಸ್ಥರ ಹೇಳಿಕೆ ದಾಖಲು

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿ ಬುಧವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ.

ಸತೀಶ್ ಮೃತಪಟ್ಟ ಕೈದಿ. ದಾಯಾದಿಗಳ ಕಲಹ ಪ್ರಕರಣ ಸಂಬಂಧ 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಸತೀಶ್ ನನ್ನು ನಾಲ್ಕು ದಿನಗಳ ಹಿಂದೆ ಪೊಲೀಸರು ಬಂಧಿಸಿ ಜಿಲ್ಲಾ ಕಾರಾಗೃಹದಲ್ಲಿ ಇರಿಸಿದ್ದರು. ಕಾರಾಗೃಹಕ್ಕೆ ಬಂದ ದಿನವೇ ಅನಾರೋಗ್ಯ ಉಂಟಾಗಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗಿನ ಜಾವ ಸಾವನ್ನಪ್ಪಿದ್ದಾನೆ.

ಸತೀಶ್ ಸಾವಿನ ಗ್ಗೆ ಪತ್ನಿ ನೇತ್ರಾ ಅನುಮಾನ ವ್ಯಕ್ತಪಡಿಸಿದ್ದಾರೆ. ಸತೀಶ್ ಕುತ್ತಿಗೆ, ಕೈ, ದೇಹದ ಇತರೆ ಭಾಗದಲ್ಲಿ ಗಾಯದ ಗುರುತುಗಳಿದ್ದು, ಕಾರಾಗೃಹದ ಸಿಬ್ಬಂದಿ ಮತ್ತು ಪೊಲೀಸರು ತೀವ್ರವಾಗಿ ಹಲ್ಲೆ ನಡೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರಿಂದಾಗಿ ಸತೀಶ್ ಮೃತಪಟ್ಟಿದ್ದಾಗಿ ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ನ್ಯಾಯಾಧೀಶರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮೃತನ ಕುಟುಂಬದವರಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read