HomeKarnatakaಮೈಸೂರು ಬಳಿ ಭೀಕರ ಅಪಘಾತ ಪ್ರಕರಣ: ಮೃತರ ಸಂ‍ಖ್ಯೆ 11 ಕ್ಕೇರಿಕೆ

ಮೈಸೂರು ಬಳಿ ಭೀಕರ ಅಪಘಾತ ಪ್ರಕರಣ: ಮೃತರ ಸಂ‍ಖ್ಯೆ 11 ಕ್ಕೇರಿಕೆ

ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿ ಸಂಭವಿಸಿದ ಅಪಘಾತದಲ್ಲಿ (Accident) ಮೃತಪಟ್ಟವರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಶಿಕುಮಾರ್ ಚಿಕಿತ್ಸೆ (Treatement) ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಮೂಲಕ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 27ರಂದು ಬಳ್ಳಾರಿಯ ಸಂಗನಕಲ್ ನಿಂದ ಮೈಸೂರಿಗೆ ಪ್ರವಾಸಕ್ಕೆಂದು ಬಂದಿದ್ದ ವೇಳೆ ಇನೋವಾ (innova Car) ಕಾರು ಚಾಲಕನ ಅಜಾಗರೂಕತೆಯಿಂದ ಈ ಘಟನೆ ಸಂಭವಿಸಿತ್ತು. ವೇಗವಾಗಿ ಬಂದ ಇನೋವಾ ಕಾರು ಖಾಸಗಿ ಬಸ್ ಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ 10 ಮಂದಿ ಮೃತಪಟ್ಟಿದ್ದರು. ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಬಳಿಕ ಚಾಮರಾಜನಗರಕ್ಕೆ ತೆರಳುತ್ತಿದ್ದರು.

ಬಿಳಿಗಿರಿ ರಂಗನ ಬೆಟ್ಟದಿಂದ ಕಾರಿನಲ್ಲಿ ಮೈಸೂರಿನ ರೈಲ್ವೆ ನಿಲ್ದಾಣಕ್ಕೆ (Mysore railway Station) ವಾಪಾಸ್ಸಾಗುತ್ತಿದ್ದಾಗ ಕುರುಬೂರು ಬಳಿಯಲ್ಲಿ ಖಾಸಗಿ ಬಸ್ಸಿಗೆ ಇನ್ನೋವ ಕಾರು ಡಿಕ್ಕಿಯಾಗಿತ್ತು. ಅಪಘಾತದ ಭೀಕರ ದೃಶ್ಯ ಬಸ್ ನಲ್ಲಿದ್ದ ಕ್ಯಾಮೆರಾದಲ್ಲಿ( camera) ಸೆರೆಯಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular