BIG NEWS: ಸಾಲಬಾಧೆ: ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ

ಮೈಸೂರು: ಸಾಲಬಾಧೆಗೆ ಮನನೊಂದ ರೈತರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, 40 ವರ್ಷದ ಅಶೋಕ್ ಮೃತ ರೈತ. ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲಿಗ್ರಾಮದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ 2.67 ಲಕ್ಷ ರೂಪಾಯಿ ಹಾಗೂ 5 ಲಕ್ಷ ಕೈಸಾಲ ಮಾಡಿದ್ದ ರೈತ ಅಶೋಕ್, ಸಾಲ ತೀರಿಸಲಾಗದೇ ಸಾವಿಗೆ ಶರಣಾಗಿದ್ದಾರೆ.

ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read