HomeLive Newsಡಿಸೆಂಬರ್ ತೆರಿಗೆ ಸಂಗ್ರಹದಲ್ಲಿ ಶೇ. 6.1 ರಷ್ಟು ಏರಿಕೆ: 1.74 ಲಕ್ಷ ಕೋಟಿ ರೂ. ಜಿ.ಎಸ್.ಟಿ....

ಡಿಸೆಂಬರ್ ತೆರಿಗೆ ಸಂಗ್ರಹದಲ್ಲಿ ಶೇ. 6.1 ರಷ್ಟು ಏರಿಕೆ: 1.74 ಲಕ್ಷ ಕೋಟಿ ರೂ. ಜಿ.ಎಸ್.ಟಿ. ಸಂಗ್ರಹ

ನವದೆಹಲಿ: ಕಳೆದ ಸೆಪ್ಟೆಂಬರ್ 22ರಂದು 375 ವಸ್ತುಗಳ ಮೇಲೆ ಜಿ.ಎಸ್.ಟಿ. ಕಡಿತ ಮಾಡುವ ಮೂಲಕ ಕೇಂದ್ರ ಸರ್ಕಾರ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿತ್ತು. ಇದು ಒಟ್ಟಾರೆ ಜಿ.ಎಸ್.ಟಿ. ಸಂಗ್ರಹದ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಿಸಲಾಗಿತ್ತು. ಆದರೆ ದೇಶಿಯ ಮಾರಾಟದಿಂದ ಬರುವ ಆದಾಯದಲ್ಲಿ ಕೊಂಚ ಇಳಿಕೆಯ ನಡುವೆ 2025 ರ ಡಿಸೆಂಬರ್ ನಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹ 2024ರ ಡಿಸೆಂಬರ್ ಗೆ ಹೋಲಿಸಿದರೆ ಶೇಕಡ 6.1 ರಷ್ಟು ಏರಿಕೆಯಾಗಿದೆ. 1.74 ಲಕ್ಷ ಕೋಟಿ ರೂ. ಜಿ.ಎಸ್.ಟಿ. ಸಂಗ್ರಹವಾಗಿದೆ.

2024ರ ಡಿಸೆಂಬರ್ ನಲ್ಲಿ 1.64 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿತ್ತು. 2025ರ ಡಿಸೆಂಬರ್ ನಲ್ಲಿ 1.74 ಲಕ್ಷ ಕೋಟಿ ರೂ. ಜಿ.ಎಸ್.ಟಿ. ಸಂಗ್ರಹವಾಗಿದೆ. ಮಹಾರಾಷ್ಟ್ರದಿಂದ 16,140 ಕೋಟಿ ರೂ., ಕರ್ನಾಟಕದಿಂದ 6716 ಕೋಟಿ ರೂ., ತಮಿಳುನಾಡಿನಿಂದ 5992 ಕೋಟಿ ರೂ. ಜಿ.ಎಸ್.ಟಿ. ಸಂಗ್ರಹವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular