HomeKarnatakaBIG NEWS: ಬಹುನಿರೀಕ್ಷಿತ ಜಾತಿಗಣತಿ ವರದಿ ಜಾರಿ ಬಗ್ಗೆ ಇಂದೇ ತೀರ್ಮಾನ ಸಾಧ್ಯತೆ: ಕುತೂಹಲ ಮೂಡಿಸಿದ...

BIG NEWS: ಬಹುನಿರೀಕ್ಷಿತ ಜಾತಿಗಣತಿ ವರದಿ ಜಾರಿ ಬಗ್ಗೆ ಇಂದೇ ತೀರ್ಮಾನ ಸಾಧ್ಯತೆ: ಕುತೂಹಲ ಮೂಡಿಸಿದ ಸಂಪುಟ ಸಭೆ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನ ಕುರಿತು ಚರ್ಚೆ ನಡೆಸಲಾಗುವುದು.

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಬಹುನಿರೀಕ್ಷಿತ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಮಂಡನೆ ಆಗುವುದಿಲ್ಲ. ಸಭೆಯ ಅಜೆಂಡಾದಲ್ಲಿ ಜಾತಿ ಗಣತಿ ವರದಿ ವಿಷಯವನ್ನು ಪ್ರಸ್ತಾಪಿಸಿಲ್ಲ. ಈ ಮೂಲಕ ಜಾತಿ ಗಣತಿ ವರದಿ ಮಂಡನೆ ಮುಹೂರ್ತ ಮತ್ತೊಮ್ಮೆ ಮುಂದೂಡಿಕೆಯಾದಂತಾಗಿದೆ.

ಮಂಗಳವಾರವಷ್ಟೇ ಹಿಂದುಳಿದ ವರ್ಗದ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಜಾರಿಯ ಬಗ್ಗೆ ಘೋಷಿಸಿದ್ದರು. ತುಂಬಾ ದಿನಗಳಿಂದ ಜಾತಿ ಗಣತಿ ವರದಿ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವುದು ಮುಂದೂಡಿಕೆಯಾಗುತ್ತಿದೆ. ಇಂದಿನ ಸಚಿವ ಸಂಪುಟ ಸಭೆಯ ಅಜೆಡಾದಲ್ಲಿ ಜಾತಿ ಗಣತಿ ವರದಿ ವಿಷಯ ಪ್ರಸ್ತಾಪಿಸಿಲ್ಲ. ಹೆಚ್ಚುವರಿ ವಿಷಯವಾಗಿ ಕೊನೆ ಕ್ಷಣದಲ್ಲಿ ಜಾತಿ ಗಣತಿ ವರದಿ ಮಂಡನೆಯಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular