HomeKarnatakaಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್: ನೀರಿನ ಶುಲ್ಕವೂ ಹೆಚ್ಚಳ

ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್: ನೀರಿನ ಶುಲ್ಕವೂ ಹೆಚ್ಚಳ

ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ನೀರಿನ ಶುಲ್ಕವೂ ಏರಿಕೆಯಾಗುವ ಸಾಧ್ಯತೆ ಇದೆ. ಕಾವೇರಿ ನೀರಿನ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮುಂದಿನ ವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಶಾಸಕರು ಮತ್ತು ಜನಪ್ರತಿನಿಧಿಗಳ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ರಾಮಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಪತ್ರ ಬರೆದು ಬೆಂಗಳೂರು ಜಲಮಂಡಳಿಯ ಪರಿಸ್ಥಿತಿಯ ಬಗ್ಗೆ ವಿವರಿಸಲಾಗಿದೆ. ಸದ್ಯ ಪ್ರತಿ ತಿಂಗಳು ಜಲಮಂಡಳಿಗೆ ಸುಮಾರು 82 ಕೋಟಿ ರೂ. ನಷ್ಟವಾಗುತ್ತಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿ ನೇತೃತ್ವದ ಸಭೆಯ ಮುಂದೆ ವಿಷಯ ಮಂಡಿಸಲಾಗುವುದು. ಸಭೆಯ ನಿರ್ಧಾರದಂತೆ ನೀರಿನ ದರ ಪರಿಷ್ಕರಿಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular