ಬೆಂಗಳೂರು : ಮಲ್ಲೇಶ್ವರಂ ರಸ್ತೆಗೆ ನಟಿ ಬಿ. ಸರೋಜಾದೇವಿ ಹೆಸರಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮಲ್ಲೇಶ್ವರಂ ನಿವಾಸದಲ್ಲಿ ನಟಿ ಬಿ. ಸರೋಜಾದೇವಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಅವರು ಮಾತನಾಡಿದರು.
ಮಲ್ಲೇಶ್ವರಂ ರಸ್ತೆಗೆ ನಟಿ ಬಿ. ಸರೋಜಾದೇವಿ ಹೆಸರಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದರು.
ಅದೇ ರೀತಿ ಪೊಲೀಸ್ ಗೌರವಗಳೊಂದಿಗೆ ಹಿರಿಯ ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಕಲ ಸರ್ಕಾರಿ, ಪೊಲೀಸ್ ಗೌರವಗಳೊಂದಿಗೆ ಹಿರಿಯ ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ ನಡೆಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಪ್ರತಿಭಾವಂತ ನಟರಾಗಿದ್ದರು. ಅವರ ನಿಧನದಿಂದ ಇಡೀ ಚಿತ್ರಕ್ಕೆ ಆಘಾತವಾಗಿದೆ ಎಂದು ಹೇಳಿದ್ದಾರೆ.
ಹಿರಿಯ ನಟಿ ಬಿ. ಸರೋಜಾದೇವಿ ನಿಧನರಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಸರೋಜಾದೇವಿ ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ. ಒಕ್ಕಲಿಗ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ .ಸದ್ಯ, ಮಲ್ಲೇಶ್ವರಂನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.