HomeKarnatakaಬಾಗಲಕೋಟೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ವೀಣಾ ಕಾಶಪ್ಪನವರ್ ಸ್ಪರ್ಧೆ ಬಗ್ಗೆ ಯುಗಾದಿ ಬಳಿಕ ನಿರ್ಧಾರ

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ವೀಣಾ ಕಾಶಪ್ಪನವರ್ ಸ್ಪರ್ಧೆ ಬಗ್ಗೆ ಯುಗಾದಿ ಬಳಿಕ ನಿರ್ಧಾರ

ಬಾಗಲಕೋಟೆ: ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಯುಗಾದಿ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಬಾಗಲಕೋಟೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಬೆಂಬಲಿಗರ ಜೊತೆ ಸಭೆ ನಡೆಸಿದ ಅವರು ನಂತರ ಮಾತನಾಡಿ, ಕೆಲವರು ಪಕ್ಷೇತರರಾಗಿ ಸ್ಪರ್ಧಿಸುವಂತೆ ಹೇಳಿದ್ದಾರೆ. ಮತ್ತೆ ಕೆಲವರು ಸ್ಥಾನಮಾನ ನೀಡಿ ಎಂದು ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ. ಇನ್ನು ಕೆಲವು ಬೆಂಬಲಿಗರು ತಟಸ್ಥರಾಗಿ ಉಳಿಯುವಂತೆ ಹೇಳುತ್ತಿದ್ದಾರೆ ಎಂದರು.

ಅವರವರ ಭಾಗದಲ್ಲಿ ಸರ್ವೆ ಮಾಡಿಸುವಂತೆ ಬೆಂಬಲಿಗರಿಗೆ ಸೂಚಿಸಿದ್ದೇನೆ. ಸರ್ವೇ ವರದಿ ನೋಡಿ ಯುಗಾದಿ ಬಳಿಕ ಮುಂದಿನ ತೀರ್ಮಾನ ತಿಳಿಸುತ್ತೇನೆ. ಸಚಿವ ಶಿವಾನಂದ ಪಾಟೀಲ್ ಮತ್ತು ಸಂಯುಕ್ತಾ ಪಾಟೀಲ್ ಅವರು ಮನೆಗೆ ಬಂದರೆ ಕೂರಿಸಿ ಮಾತನಾಡುತ್ತೇನೆ. ನನಗೆ ಆಗಿರುವ ಅನ್ಯಾಯದ ಬಗ್ಗೆ ತಿಳಿಸುತ್ತೇನೆ. ಬಳಿಕ ನನ್ನ ಬೆಂಬಲಿಗರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳುತ್ತೇನೆ ಎಂದು ಬಾಗಲಕೋಟೆಯ ನವನಗರ ನಿವಾಸದ ಬಳಿ ವೀಣಾ ಕಾಶಪ್ಪನವರ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular