HomeKarnatakaಬರ ಪೀಡಿತ ರಾಜ್ಯವೆಂದು ಘೋಷಿಸಿ : ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಿಎಸ್ ವೈ ಆಗ್ರಹ

ಬರ ಪೀಡಿತ ರಾಜ್ಯವೆಂದು ಘೋಷಿಸಿ : ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಿಎಸ್ ವೈ ಆಗ್ರಹ

ದಾವಣಗೆರೆ : ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದ್ದು, ಬಿತ್ತನೆ ಕಾರ್ಯವೂ ಸರಿಯಾಗಿ ನಡೆದಿಲ್ಲ. ಹೀಗಾಗಿ ರಾಜ್ಯವನ್ನು ಬರ ಪೀಡಿತವೆಂದ ಘೋಷಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದ್ದು, ಶೇ. 10 ರಷ್ಟು ಬಿತ್ತನೆ ಕಾರ್ಯ ಆಗಿಲ್ಲ. ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಕರ್ನಾಟಕವನ್ನು ಬರ ಪೀಡಿತ ರಾಜ್ಯವೆಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ಮಳೆ ಇಲ್ಲದೇ ಜನರು ಕಂಗಾಲಾಗಿದ್ದಾರೆ. ಸರ್ಕಾರ ಮಾತ್ರ ಬರ ಪೀಡಿತ ಪ್ರದೇಶ, ಬರ ಪೀಡಿತ ರಾಜ್ಯವೆಂಬ ಘೋಷಣೆಗೆ ಮೀನ-ಮೇಷ ಎಣಿಸುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular