HomeKarnatakaBIG NEWS: ಹಸಿರು ಪಟಾಕಿಗೆ ಮಾತ್ರ ಅವಕಾಶ: ಸುರಕ್ಷತೆ ವಿಷಯದಲ್ಲಿ ಲೋಪವಾಗದಂತೆ ಡಿಸಿ, ಎಸ್ ಪಿಗಳಿಗೆ...

BIG NEWS: ಹಸಿರು ಪಟಾಕಿಗೆ ಮಾತ್ರ ಅವಕಾಶ: ಸುರಕ್ಷತೆ ವಿಷಯದಲ್ಲಿ ಲೋಪವಾಗದಂತೆ ಡಿಸಿ, ಎಸ್ ಪಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಶ್ಠಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ನಿಡಬೇಕು ಎಂದರು.

ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular