BIG NEWS: ಪಟಾಕಿ ಅವಘಡದಿಂದ ಕಣ್ಣಿಗೆ ಗಾಯ: ಮಿಂಟೋ ಆಸ್ಪತ್ರೆಗೆ 29 ಜನರು ದಾಖಲು

ಬೆಂಗಳೂರು: ರಾಜ್ಯಾದ್ಯಂತ ದೀಪಾವಳಿ ಹಬ್ಬದ ಆಚರಣೆ ವಿಜೃಂಭಣೆಯಿಂದ ನಡೆಯುತ್ತಿದೆ. ಪಟಾಕಿ ಸದ್ದು ಜೋರಾಗಿದೆ. ಆದರೆ ಪಟಾಕಿ ಅವಘಡದಿಂದಾಗಿ ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಸಡಗರದ ನಡುವೆ ಪಟಾಕಿ ಹೊಡೆದು ಸಂಭ್ರಮಿಸಲು ಹೋಗಿ ಹಲವರು ಕಣ್ಣುಗಳಿಗೆ ಗಾಯ ಮಾಡಿಕೊಂಡಿದ್ದಾರೆ. ಪಟಾಕಿ ಕಿಡಿ ತಾಗಿ ಕಣ್ಣಿಗೆ ಗಾಯಮಾಡಿಕೊಂಡಿರುವ 29 ಜನರು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮಿಂಟೋ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 15 ಪ್ರಕರಣಗಳು ದಾಖಲಾಗಿವೆ. ಒಟ್ಟು 29 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ 8 ಜನರಿಗೆ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ.

ವಯಸ್ಕರರು 9 ಜನರು, 9 ಮಕ್ಕಳು, ಅಕ್ಕಪಕ್ಕ ನಿಂತಿದ್ದವರಿಗೆ ಪಟಾಕಿ ಕಿಡಿ ತಗುಲಿ ಗಾಯಗೊಂಡ 8 ಜನ, ಸ್ವತಃ ಪಟಾಕಿ ಹಚ್ಚುವಾಗ ಕಣ್ಣಿಗೆ ಕಿಡಿ ತಗುಲಿ ಗಾಯಗೊಂಡ 7 ಜನರು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಇಬ್ಬರಿಗೆ ಸರ್ಜರಿ ಮಾಡಲಾಗಿದೆ. 15 ಜನರು ಗಂಭೀರವಾಗಿ ಗಾಯಗೊಂಡವರಿದ್ದು, 14 ಜನರು ಸಣ್ಣಪುಟ್ಟ ಗಾಯಗೊಂಡವರಾಗಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read