HomeKarnatakaGOOD NEWS: ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ವಿಶೇಷ ರೈಲು ಸಂಚಾರ

GOOD NEWS: ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ವಿಶೇಷ ರೈಲು ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಪ್ರಮುಖ ರೈಲು ನಿಲ್ದಾಣಗಳ ನಡುವೆ ವಿಶೆಷ ರೈಲು ಸಂಚಾರ ನಡೆಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಅಕ್ಟೋಬರ್ 31ರಿಂದ ನವೆಂಬರ್ 2ರವರೆಗೆ ರಾಜ್ಯಾದ್ಯಂತ ಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ ನಡೆಸಲಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಚಿವ ಸೋಮಣ್ಣ ಮಾಹಿತಿ ಹಂಚಿಕೊಂಡಿದ್ದಾರೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಜನದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕಾಗಿ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಇದೇ ಅಕ್ಟೋಬರ್ 31, 2024 ರಿಂದ ನವೆಂಬರ್ 2, 2024 ರ ವರೆಗೆ ರಾಜ್ಯದಾದ್ಯಂತ ವಿಶೇಷ ರೈಲುಗಳು ಸಂಚರಿಸಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳಾದ ಬೆಳಗಾವಿಯಿಂದ ಮೀರಜ್, ಬೆಂಗಳೂರಿನಿಂದ ಬೆಳಗಾವಿ, ಮೈಸೂರಿನಿಂದ ವಿಜಯಪುರದವರೆಗೆ ಹಾಗೂ ವಿಸ್ತರಿತ ರೈಲ್ವೆ ಮಾರ್ಗ ಹುಬ್ಬಳ್ಳಿಯಿಂದ ರಾಮೇಶ್ವರಂ ಹಾಗೂ ಋಷಿಕೇಶದಿಂದ ಹುಬ್ಬಳ್ಳಿವರೆಗೆ ವಿಶೇಷ ರೈಲುಗಳು ಸಂಚರಿಸಲಿವೆ.

ಪ್ರಯಾಣಿಕರಿಗೆ ಉತ್ತಮ ಸಂಚಾರದ ವ್ಯವಸ್ಥೆ ಕಲ್ಪಿಸಲು ಭಾರತೀಯ ರೈಲ್ವೆ ಒಟ್ಟು 34 ವಿಶೇಷ ರೈಲುಗಳ ವ್ಯವಸ್ಥೆಮಾಡಿದೆ. ಸಾರ್ವಜನಿಕರು ಈ ವಿಶೇಷ ರೈಲುಗಳ ಸೌಲಭ್ಯ ಪಡೆದುಕೊಳ್ಳಿ, ನಿಮ್ಮ ಹಬ್ಬದ ಸಂಭ್ರಮ ಇಮ್ಮಡಿಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular