HomeIndiaBIG NEWS: ಹಬ್ಬದ ದಿನವೇ ಮತ್ತೊಂದು ದುರಂತ; ಪಟಾಕಿ ಸಿಡಿದು 4 ವರ್ಷದ ಮಗು ದುರ್ಮರಣ

BIG NEWS: ಹಬ್ಬದ ದಿನವೇ ಮತ್ತೊಂದು ದುರಂತ; ಪಟಾಕಿ ಸಿಡಿದು 4 ವರ್ಷದ ಮಗು ದುರ್ಮರಣ

ಚೆನ್ನೈ: ಬೆಳಕಿನ ಹಬ್ಬ ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸುವಾಗ ಎಷ್ಟು ಎಚ್ಚರವಾಗಿದ್ದರೂ ಕಡಿಮೆಯೇ. ಪಟಾಕಿ ಸಿಡಿದು ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನ ರಾಣಿಪೇಟೆಯಲ್ಲಿ ಈ ದುರಂತ ಸಂಭವಿಸಿದೆ. ನಿಮಿಷಾ ಮೃತ ಮಗು. ರಮೇಶ್ ಹಾಗೂ ಕುಟುಂಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸುತ್ತಿದ್ದಾಗ ಆಕಸ್ಮಿಕವಾಗಿ ಪಟಾಕಿ ಮಗುವಿನ ಮೇಲೆ ಬಿದ್ದಿದೆ. ಮಗುವಿನ ಎದೆ ಹಾಗೂ ಕೈಗಳಿಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣವೇ ಮಗುವನ್ನು ಚೇಯಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲೇ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular