HomeEntertainmentBIG NEWS: ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಹಾಕಿದ ದುಷ್ಕರ್ಮಿ: ಪ್ರಕರಣ ದಾಖಲು

BIG NEWS: ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಹಾಕಿದ ದುಷ್ಕರ್ಮಿ: ಪ್ರಕರಣ ದಾಖಲು

ಬೆಂಗಳೂರು: ಕನ್ನಡ ಕಿರುತೆರೆ ಖ್ಯಾತ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ದೀಪಿಕಾ ದಾಸ್ ತಾಯಿಗೆ ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ದೀಪಿಕಾ ದಾಸ್ ತಾಯಿ ಪದ್ಮಲತಾ ಅವರಿಗೆ ದುಷ್ಕರ್ಮಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ. ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿರುವ ಮನೆಗೆ ಬಂದು ಕಿಡಿಗೇಡಿ, ಮಧ್ಯರಾತ್ರಿ ಬೆದರಿಕೆಯೊಡ್ಡಿದ್ದಾನೆ ಎಂದು ತಿಳಿದುಬಂದಿದೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ದುಷ್ಕರ್ಮಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular