ನವದೆಹಲಿ: ಈ ವರ್ಷ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ 77ನೇ ಗಣರಾಜ್ಯೋತ್ಸವ ಮೆರವಣಿಗೆಯನ್ನು ವೀಕ್ಷಿಸಲು ಸುಮಾರು 10 ಸಾವಿರ ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಆದಾಯ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಅನುಕರಣೀಯ ಕೆಲಸ ಮಾಡಿದವರು, ಅತ್ಯುತ್ತಮ ಸಾಧಕರು, ನವೋದ್ಯಮಗಳು, ಸ್ವಸಹಾಯ ಗುಂಪುಗಳು ಮತ್ತು ವಿವಿಧ ಸರ್ಕಾರಿ ಉಪಕ್ರಮಗಳ ಅಡಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವವರು ಅತಿಥಿಗಳಾಗಿರುತ್ತಾರೆ.
ರಾಷ್ಟ್ರ ನಿರ್ಮಾಣ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಕಾರ್ಯಕ್ರಮಗಳಲ್ಲಿ ಜನ ಭಾಗೀದಾರಿಯನ್ನು ಹೆಚ್ಚಿಸುವಲ್ಲಿ ಅವರ ಕೊಡುಗೆಗಳನ್ನು ಗೌರವಿಸುವ ಉದ್ದೇಶದಿಂದ ಅತಿಥಿಗಳನ್ನು ಆಹ್ವಾನಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ವಿಜೇತರು, ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ಮತ್ತು PM SMILE ಯೋಜನೆಯಡಿ ಪುನರ್ವಸತಿ ಪಡೆದ ಭಿಕ್ಷುಕರು ಮತ್ತು ನೈಸರ್ಗಿಕ ಕೃಷಿಯನ್ನು ಅಭ್ಯಾಸ ಮಾಡುವ ರೈತರು ಸೇರಿದಂತೆ ಇತರರು ವಿಶೇಷ ಅತಿಥಿಗಳಲ್ಲಿ ಸೇರಿದ್ದಾರೆ.

