HomeLatest NewsBREAKING: ಇಂದು ಬೆಳಗ್ಗೆ 10 ಗಂಟೆಗೆ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಬಗ್ಗೆ ರಕ್ಷಣಾ ಸಚಿವಾಲಯ ಮಾಹಿತಿ

BREAKING: ಇಂದು ಬೆಳಗ್ಗೆ 10 ಗಂಟೆಗೆ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಬಗ್ಗೆ ರಕ್ಷಣಾ ಸಚಿವಾಲಯ ಮಾಹಿತಿ

ನವದೆಹಲಿ: ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಬಗ್ಗೆ ಬೆಳಿಗ್ಗೆ 10 ಗಂಟೆಗೆ ರಕ್ಷಣಾ ಸಚಿವಾಲಯ ಮಾಧ್ಯಮಗಳಿಗೆ ಮಾಹಿತಿ ನೀಡಲಿದೆ.

 ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಬುಧವಾರ ಬೆಳಗಿನ ಜಾವ ಸಶಸ್ತ್ರ ಪಡೆಗಳು ದಾಳಿ ನಡೆಸಿದ ಪಹಲ್ಗಾಮ್ ದಾಳಿಗೆ ಭಾರತದ ಮಿಲಿಟರಿ ಪ್ರತೀಕಾರವಾದ ‘ಆಪರೇಷನ್ ಸಿಂಧೂರ್’ ಬಗ್ಗೆ ಮಾಹಿತಿ ನೀಡಲು ರಕ್ಷಣಾ ಸಚಿವಾಲಯ ನವದೆಹಲಿಯಲ್ಲಿ 10 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದೆ.

ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ) ದಲ್ಲಿನ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ನಿಖರವಾದ ದಾಳಿ ನಡೆಸಿದ ನಂತರ ಪ್ರಧಾನಿ ನರೇಂದ್ರ ಮೋದಿ ರಾತ್ರಿಯಿಡೀ ‘ಆಪರೇಷನ್ ಸಿಂದೂರ್’ ಅನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿದ್ದಾರೆ. ಎಲ್ಲಾ ಒಂಬತ್ತು ಗುರಿಗಳ ಮೇಲೆ ದಾಳಿ ಯಶಸ್ವಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular