BIG NEWS: ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಬೆಂಕಿ ಅವಘಡ: ಅಪಾರ ಪ್ರಮಾಣದ ಹಣ ಪತ್ತೆ

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಹೋದಾಗ ಅಪಾರ ಪ್ರಮಾಣದ ಕಂತೆ ಕಂತೆ ನಗದು ಹಣ ಪತ್ತೆಯಾಗಿದೆ. ಈ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಘಟನೆ ಬೆನ್ನಲ್ಲೇ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಬಾದ್ ಹೈಕೋರ್ಟ್ ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಜಡ್ಜ್ ಮನೆಯಲ್ಲಿ ಹಣ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ, ಸಭೆ ನಡೆಸಿ, ಯಶ್ವಂತ್ ವರ್ಮಾ ಅವರನ್ನು ತಕ್ಷಣವೇ ದೆಹಲಿ ಹೈಕೋರ್ಟ್ ನಿಂದ ಮಾತೃ ಸಂಸ್ಥೆ ಅಲಹಾಬಾದ್ ಹೈಕೋರ್ಟ್ ಗೆ ವರ್ಗಾಯಿಸಿದ್ದಾರೆ.

ಯಶವಂತ್ ವರ್ಮಾ ಮನೆಯಲ್ಲಿ ಇಲ್ಲದ ವೇಳೆ ಮನೆಯಲ್ಲಿ ಬೆಂಕಿ ಸಂಭವಿಸಿದೆ. ಕುಟುಂಬದವರು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಬೆಂಕಿ ನಂದಿಸುವಾಗ ಪರಿಶೀಲನೆ ವೇಳೆ ಭಾರಿ ಪ್ರಮಾಣದಲ್ಲಿ ಹಣ ಪತ್ತೆಯಾಗಿದೆ. ಹಣದ ಮೂಲದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಈ ಘಟನೆ ನ್ಯಾಯಮೂರ್ತಿಗಳ ವೃತ್ತಿಪರ ನಡವಳಿಕೆ ಹಾಗೂ ಸಮಗ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಬಗ್ಗೆ ತನಿಖೆ ನಡೆಯಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ.

ನ್ಯಾ.ವರ್ಮಾ ವರ್ಗಾವಣೆಗಿಂತ ಅವರು ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಬೇಕು ಎಂದು ಕೊಲಿಜಿಯಂ ಕೆಲ ನ್ಯಾಯಾಧೀಶರು ಒತ್ತಾಯಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read