HomeJobsಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ನಿರಾಸೆ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ನಿರಾಸೆ

ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಪಡೆಯಬೇಕು ಎಂಬ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಕಾಯುವುದು ಅನಿವಾರ್ಯವಾಗಿದೆ. ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ  ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿಲ್ಲ. ಆದ್ದರಿಂದ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ ಇನ್ನೂ ವಿಳಂಬವಾಗಲಿದೆ.

ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ  ಮಸೂದೆಗೆ ಒಪ್ಪಿಗೆ ಸಿಕ್ಕಿದೆ. ಸರ್ಕಾರ ಇದನ್ನು ಅಂತಿಮ ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳಿಸಿತ್ತು.

ರಾಜ್ಯಪಾಲರು ಸರ್ಕಾರ ಕಳಿಸಿದ್ದ 22 ಮಸೂದೆಗಳಲ್ಲಿ 19ಕ್ಕೆ ಅಂತಿಕ ಹಾಕಿದ್ದಾರೆ. ವಾಪಸ್ ಕಳಿಸಿ, ಕೆಲ ಸ್ಪಷ್ಟನೆಗಳನ್ನು ಕೇಳಲಾದ ಮಸೂದೆಗಳಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ  ಮಸೂದೆಯೂ ಸೇರಿದೆ. ಆದ್ದರಿಂದ ಅಂತಿಮ ಅನುಮೋದನೆ ಸಿಗುವ ತನಕ ಹೊಸ ನೇಮಕಾತಿ ನಡೆಯುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಕ್ಷಾಂತರ ಹುದ್ದೆಗಳು ಖಾಲಿ: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇದೆ. ಸರ್ಕಾರವೇ ನೀಡಿದ ಮಾಹಿತಿಯಂತೆ ಸುಮಾರು 2 ಲಕ್ಷದ 80 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಇದೆ.

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ  ಮಸೂದೆಗೆ ಅಂಗೀಕಾರ ಸಿಗುವ ತನಕ ನೇಮಕಾತಿ ಆದೇಶವನ್ನು ಹೊರಡಿಸುವಂತಿಲ್ಲ ಎಂದು ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ. ಆದ್ದರಿಂದ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಕಾಯುವುದು ಅನಿವಾರ್ಯವಾಗಿದೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ  ಮಸೂದೆಗೆ ಅಂಗೀಕಾರ ನೀಡಲಾಗಿದೆ. ವಿವಿಧ ಉಪ ಪಂಗಡಕ್ಕೆ 6:6:5 ಅನುಪಾತದಲ್ಲಿ ಮೀಸಲಾತಿ ಜಾರಿಗೊಳಿಸಿ ಶೇ 17ರ ಮೀಸಲಾತಿ ಕೋಟಾವನ್ನು ವಿಭಾಗ ಮಾಡಲಾಗಿತ್ತು.

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ಕಾರಣಕ್ಕೆ 2024ರ ಅಕ್ಟೋಬರ್‌ನಿಂದ ಯಾವುದೇ ಸರ್ಕಾರಿ ಹುದ್ದೆಗಳ ನೇಮಕಾತಿ ನಡೆಯುತ್ತಿಲ್ಲ. ಈಗ ಈ ನೇಮಕಾತಿ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುತ್ತಿದೆ. ಹುದ್ದೆಗಳು ಖಾಲಿ ಇರುವ ಕಾರಣ ಇರುವ ಅಧಿಕಾರಿ/ ನೌಕರರ ಮೇಲೆ ಕೆಲಸದ ಹೊರೆ ಹೆಚ್ಚಿದೆ.

ರಾಜ್ಯಪಾಲರು ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ  ಮಸೂದೆ ವಾಪಸ್ ಕಳಿಸಿದ ಕುರಿತು ಮಾತನಾಡಿರುವ ಕಾನೂನು ಸಚಿವ ಎಚ್.ಕೆ.ಪಾಟೀಲ್, “ರಾಜ್ಯಪಾಲರು ಅಧಿವೇಶನದಲ್ಲಿ ಅಂಗೀಕರಿಸಲಾದ ಯಾವುದೇ ಮಸೂದೆ ಬಗ್ಗೆ ಸ್ಪಷ್ಟೀಕರಣ ಕೇಳಿ ಅದನ್ನು ವಾಪಸ್ ಕಳಿಸುವುದು ಸಹಜವಾದ ಪ್ರಕ್ರಿಯೆ” ಎಂದು ಹೇಳಿದ್ದಾರೆ.

“ಸರ್ಕಾರಕ್ಕೆ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ  ಮಸೂದೆ ಬಹಳ ಮುಖ್ಯವಾಗಿದೆ. ಮಸೂದೆ ಕುರಿತು ಎತ್ತಿರುವ ಆಕ್ಷೇಪಣೆಗಳಿಗೆ ಸರ್ಕಾರ ಶೀಘ್ರದಲ್ಲೇ ಸ್ಪಷ್ಟೀಕರಣವನ್ನು ನೀಡಿ, ವಾಪಸ್ ಕಳಿಸಿಕೊಡಲಾಗುತ್ತದೆ” ಎಂದು ತಿಳಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಶಿಕ್ಷಣ, ಆರೋಗ್ಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ 30,000 ಹುದ್ದೆಗಳಿಗೆ ತುರ್ತಾಗಿ ನೇಮಕಾತಿ ನಡೆಯಬೇಕಿದೆ. ಆದರೆ ಅದಕ್ಕೂ ಮೊದಲು ರಾಜ್ಯಪಾಲರು ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ  ಮಸೂದೆಗೆ ಒಪ್ಪಿಗೆ ನೀಡಬೇಕಿದೆ.

ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ವರದಿ ನೀಡಲು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ ಸಮಿತಿ ನೀಡುವ ವರದಿಗಾಗಿ ಕಾಯುತ್ತಿತ್ತು. ವರದಿ ಬಂದ ಬಳಿಕ ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಸೂಚಿಸಿ, ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಿತ್ತು.

ಆದ್ದರಿಂದ 2024ರ ಅಂತ್ಯದಿಂದ ಇಲ್ಲಿಯ ತನಕ ನೇಮಕಾತಿ ನಡೆಯುತ್ತಿಲ್ಲ. ಅಭ್ಯರ್ಥಿಗಳ ವಯೋಮಿತಿ ಮೀರಿ ಹೋಗುತ್ತಿದ್ದು, ಯಾವಾಗ ಸರ್ಕಾರಿ ಕೆಲಸ ಸಿಗಲಿದೆ? ಎಂದು ಅಭ್ಯರ್ಥಿಗಳು ಕಾಯುವಂತೆ ಆಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular