HomeIndiaಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನನ್ನೇ ಕೊಂದ ಬಾಲಕ

ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನನ್ನೇ ಕೊಂದ ಬಾಲಕ

ನವದೆಹಲಿ: 14 ವರ್ಷದ ಬಾಲಕನೊಬ್ಬ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕನನ್ನು ಕೊಂದು ಬಂಧನಕ್ಕೊಳಗಾಗಿದ್ದಾನೆ.

ದೆಹಲಿಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಹಲವಾರು ಸಂದರ್ಭಗಳಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ಶಿಕ್ಷಕನನ್ನು ಕೊಂದಿದ್ದಾನೆ. ಹರಿತವಾದ ಆಯುಧದಿಂದ ಕೊಲೆ ಮಾಡಿದ ಮೂರು ದಿನಗಳ ನಂತರ ಆರೋಪಿಯನ್ನು ಶುಕ್ರವಾರ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾಮಿಯಾ ನಗರದ ಬಟ್ಲಾ ಹೌಸ್‌ನಲ್ಲಿರುವ ಕಟ್ಟಡದ ಎರಡನೇ ಮಹಡಿಯಲ್ಲಿ ಅಪಾರ್ಟ್‌ಮೆಂಟ್ ತೆರೆದಿದ್ದು, ಅದರ ಹೊರಗೆ ರಕ್ತ ಚೆಲ್ಲಿರುವುದು ಕಂಡುಬಂದಿದೆ. ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಪೊಲೀಸ್ ತಂಡವು ವ್ಯಕ್ತಿಯ ಕತ್ತಿನ ಮೇಲೆ ಆಳವಾದ ಗಾಯಗಳೊಂದಿಗೆ ನೆಲದ ಮೇಲೆ ಬಿದ್ದಿರುವುದನ್ನು ಕಂಡಿದ್ದಾರೆ.

ಖಾಸಗಿ ಬೋಧಕನಾಗಿ ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ ಸಲಿಂಗಕಾಮಿಯಾಗಿದ್ದು, ಸುಮಾರು ಎರಡು ತಿಂಗಳ ಹಿಂದೆ ಬಾಲಾಪರಾಧಿಯನ್ನು ಭೇಟಿಯಾಗಿದ್ದ. ನಂತರ ಅವನು ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸ್ ಉಪ ಆಯುಕ್ತ(ಆಗ್ನೇಯ) ರಾಜೇಶ್ ಡಿಯೋ ಹೇಳಿದ್ದಾರೆ.

ಬೋಧಕನು ತನ್ನ ವಿದ್ಯಾರ್ಥಿಯ ಖಾಸಗಿ ವಿಡಿಯೋ ಸಹ ರೆಕಾರ್ಡ್ ಮಾಡಿದ್ದಾನೆ. ತನ್ನ ಬೇಡಿಕೆಗಳನ್ನು ಕೇಳದಿದ್ದರೆ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ರೋಸಿ ಹೋಗಿದ್ದ ಬಾಲಕ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಮೃತನ ಮೊಬೈಲ್ ಫೋನ್, ಘಟನೆಯ ವೇಳೆ ಬಾಲಾಪರಾಧಿ ಧರಿಸಿದ್ದ ಬಟ್ಟೆ ಮತ್ತು ಶೂಗಳನ್ನು ಆತನಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular