HomeIndiaಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಸಾವು

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಸಾವು

ನವದೆಹಲಿ: ದೆಹಲಿಯ ಕ್ರಿಶನ್ ವಿಹಾರ್‌ನ ಆರ್‌ಡಿ ಪಬ್ಲಿಕ್ ಸ್ಕೂಲ್ ಬಳಿಯ ಕ್ಯೂ-ಬ್ಲಾಕ್ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟ ಸಂಭವಿಸಿದೆ.

ಸ್ಫೋಟದಿಂದ ಎರಡು ಅಂತಸ್ತಿನ ಮನೆಯ ಅರ್ಧದಷ್ಟು ಕುಸಿದಿದೆ. 24 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮೃತರನ್ನು ರಜನಿ ಎಂದು ಗುರುತಿಸಲಾಗಿದೆ, ಮತ್ತೋರ್ವ ಮಹಿಳೆಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ದೆಹಲಿ ಅಗ್ನಿಶಾಮಕ ಸೇವೆಯ ಎರಡು ವಾಹನಗಳ ಸಿಬ್ಬಂದಿ ತಕ್ಷಣವೇ ಘಟನಾ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಸ್ಫೋಟದ ಕಾರಣವನ್ನು ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಜನಿ ಅವರನ್ನು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ಕರೆ ತರುವಾಗ ಮೃತಪಟ್ಟಿದ್ದಾರೆ. ಇನ್ನೋರ್ವ ಮಹಿಳೆ 20 ವರ್ಷದ ರೇಣು ಸುಟ್ಟ ಗಾಯಗಳಾಗಿದ್ದು, ಸದ್ಯ ಶೇ.18ರಷ್ಟು ಸುಟ್ಟ ಗಾಯಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular