HomeLatest Newsಗುಟ್ಕಾ ಉಗುಳಿದ ವಿಚಾರಕ್ಕೆ ಗಲಾಟೆ: ವ್ಯಕ್ತಿ ಮೇಲೆ ಫೈರಿಂಗ್

ಗುಟ್ಕಾ ಉಗುಳಿದ ವಿಚಾರಕ್ಕೆ ಗಲಾಟೆ: ವ್ಯಕ್ತಿ ಮೇಲೆ ಫೈರಿಂಗ್

ನವದೆಹಲಿ: ಈಶಾನ್ಯ ದೆಹಲಿಯ ಖಜುರಿ ಖಾಸ್ ಪ್ರದೇಶದಲ್ಲಿ ಗುಟ್ಕಾ ಉಗುಳುವ ವಿವಾರಕ್ಕೆ ಗಲಾಟೆಯಾಗಿ 35 ವರ್ಷದ ವ್ಯಕ್ತಿಯ ಮೇಲೆ ಗುಂಡು ಹಾರಿಸಿ ಗಾಯಗೊಳಿಸಲಾಗಿದೆ.

ಖಜುರಿ ಖಾಸ್ ನಿವಾಸಿ ಅಮೀರ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯ ಬೆನ್ನಿಗೆ ಗುಂಡೇಟು ತಗುಲಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಶನಿವಾರ ‘ಗುಟ್ಕಾ’ ಬಳಸುವ ಬಗ್ಗೆ ನೆರೆಹೊರೆಯವರ ನಡುವೆ ನಡೆದ ಜಗಳದಿಂದ ವಿವಾದ ಭುಗಿಲೆದ್ದಿತು. ಎರಡೂ ಕಡೆಯವರ ನಡುವೆ ಯಾವುದೇ ದ್ವೇಷವಿರಲಿಲ್ಲ. ವಾಗ್ವಾದ ತಾರಕಕ್ಕೇರಿದಾಗ ಒಬ್ಬಾತ ಮನೆಯಲ್ಲಿದ್ದ ಬಂದೂಕಿನಿಂದ ಗುಂಡು ಹಾರಿಸಿದಾಗ ಆಮಿರ್ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಹಿತಿ ತಿಳಿದ ಪೊಲೀಸ್ ತಂಡವು ಸ್ಥಳಕ್ಕೆ ಹೋಗಿ ತನಿಖೆ ನಡೆಸಿದೆ. ಅಮನ್(20), ಇರ್ಫಾನ್(40), ಮತ್ತು ರೆಹಾನ್(18) ಅವರನ್ನು ಪ್ರಕರಣದಲ್ಲಿ ಆರೋಪಿಗಳೆಂದು ಗುರುತಿಸಲಾಗಿದೆ.

ಆರೋಪಿಗಳಲ್ಲಿ ಒಬ್ಬನಾದ ಅಮನ್‌ ನನ್ನು ಬಂಧಿಸಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಮತ್ತು ಅಪರಾಧದಲ್ಲಿ ಬಳಸಲಾದ ಬಂದೂಕನ್ನು ವಶಪಡಿಸಿಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular