HomeIndiaಆಕ್ಸಿಜನ್ ಸಿಲಿಂಡರ್ ಸ್ಫೋಟ: ಓರ್ವ ಸಾವು; ನಾಲ್ವರ ಸ್ಥಿತಿ ಗಂಭೀರ

ಆಕ್ಸಿಜನ್ ಸಿಲಿಂಡರ್ ಸ್ಫೋಟ: ಓರ್ವ ಸಾವು; ನಾಲ್ವರ ಸ್ಥಿತಿ ಗಂಭೀರ

ನವದೆಹಲಿ: ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೆಹಲಿಯ ಓಖ್ಲಾ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಸಿಲಿಂಡರ್ ಗಳನ್ನು ವಾಹನದಿಂದ ಇಳಿಸುವಾಗ ಆಕ್ಸಿಜನ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಪ್ರದೇಶದ ಗಾಜಿಯಾಬಾದ್‌ನಿಂದ ಕೈಗಾರಿಕಾ ಆಕ್ಸಿಜನ್ ಸಿಲಿಂಡರ್‌ಗಳನ್ನು ತುಂಬಿಕೊಂಡು ವಾಹನವೊಂದು ಓಖ್ಲಾ ಹಂತ-1 ರ ಡಿ-23 ಆವರಣದಲ್ಲಿರುವ ‘ಎಸ್‌ಎಂ ಟ್ರೇಡರ್ಸ್’ ಗೋಡೌನ್‌ಗೆ ಬಂದಿತ್ತು. ಈ ವೇಳೆ ಕಾರ್ಮಿಕರು ಸಿಲಿಂಡರ್‌ಗಳನ್ನು ಅನ್‌ಲೋಡ್ ಮಾಡುತ್ತಿದ್ದಾಗ, ಒಂದು ಸಿಲಿಂಡರ್ ಕೈತಪ್ಪಿ ರಸ್ತೆಗೆ ಬಿದ್ದಿದೆ. ಸಿಲಿಂದರ್ ಬೀಳುತ್ತಿದ್ದಂತೆ ಭೀಕರ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲೇ ಕಾರ್ಮಿಕ ಮ್ರ‍ಿತಪಟ್ಟಿದ್ದಾನೆ. ಮೃತನನ್ನು ಮೋಹಿತ್ ಸಿಂಗ್ (35) ಎಂದು ಗುರುತಿಸಲಾಗಿದೆ. ಈತ ರಾಜಸ್ಥಾನದ ಜೈಪುರ ಮೂಲದವನು. ಕಳೆದ ಮೂರು ವರ್ಷಗಳಿಂದ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇನ್ನು ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಉಮೇಶ್, ಅರವಿಂದ್, ಮನೋಜ್ ಮತ್ತು ಪಂಕಜ್ ಎಂದು ಗುರುತಿಸಲಾಗಿದೆ. ನಾಲ್ವರನ್ನೂ ದೆಹಲಿಯ ಏಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೂರು ಅಗ್ನಿಶಾಮಕ ವಾಹನಗಳು ಹಾಗೂ ರಕ್ಷಣಾ ತಂಡಗಳು ಘಟನಾ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಒಂದು ಸಿಲಿಂಡರ್ ಮಾತ್ರ ಸ್ಫೋಟಗೊಂಡಿದೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಗೋದಾಮಿನಲ್ಲಿ ಪ್ರತಿದಿನ ಸುಮಾರು 70 ರಿಂದ 80 ಸಿಲಿಂಡರ್‌ಗಳನ್ನು ನಿರ್ವಹಿಸಲಾಗುತ್ತಿತ್ತು ಎಂದು ತಿಳಿದುಬಂದಿದ್ದು, ಸ್ಟಾಕ್ ರಿಜಿಸ್ಟರ್, ಬಿಲ್‌ಗಳು ಮತ್ತು ಪೂರೈಕೆದಾರರ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲ ತಂಡವು ಸ್ಥಳಕ್ಕೆ ಭೇಟಿ ನೀಡಿ ತಾಂತ್ರಿಕ ಕಾರಣಗಳ ಕುರಿತು ಮಾದರಿಗಳನ್ನು ಸಂಗ್ರಹಿಸಿದೆ.

ಎಸ್‌ಎಂ ಟ್ರೇಡರ್ಸ್ ಸಂಸ್ಥೆಯು ಕೈಗಾರಿಕಾ ಆಮ್ಲಜನಕ ಸಿಲಿಂಡರ್‌ಗಳ ಸಂಗ್ರಹಣೆ ಹಾಗೂ ವಿತರಣೆಗೆ ಅಗತ್ಯವಾದ ಸರ್ಕಾರಿ ಪರವಾನಗಿ, ಸುರಕ್ಷತಾ ಪ್ರಮಾಣಪತ್ರ ಮತ್ತು ಶಾಸನಬದ್ಧ ನಿಯಮಗಳನ್ನು ಪಾಲಿಸುತ್ತಿತ್ತೇ ಎಂಬುದರ ಕುರಿತು ದೆಹಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ ದುರಂತ: ಬಾಯ್ಲರ್ ಗೆ ಬಿದ್ದು ಕಾರ್ಮಿಕ ದುರ್ಮರಣ; ತೀವ್ರಗೊಂಡ ಪ್ರತಿಭಟನೆ

ಮಂಡ್ಯ: ಮಂಡ್ಯದ ಮೈಶುಗರ್ ಕಾರ್ಖಾನೆ ಬಾಯ್ಲರ್ ಗೆ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ದುರಂತದ ಬೆನ್ನಲ್ಲೇ ಕುಟುಂಬಸ್ಥರು ಕಾರ್ಖಾನೆ ಮುಂದು ಪ್ರತಿಭಟನೆ ನಡೆಸಿದ್ದಾರೆ.

ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಯ್ಲರ್ ಗೆ ಬಿದ್ದು ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದ. ಗಾಯಾಳುವನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಕೆ.ಶೆಟ್ಟಿಹಳ್ಳಿಯ ಚರಣ್ ಕುಮಾರ್ (33) ಮೃತ ಕಾರ್ಮಿಕ. ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂಬ ಆರೋಪಗಳು ಕೇಳಿಬಂದಿದ್ದು. ಚರಣ್ ಕುಮಾರ್ ಸಾವಿಗೆ ಆಡಳಿತ ಮಂಡಳಿಯೇ ಕಾರಣ ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಕಾರ್ಮಿಕರ ಸುರಕ್ಷತೆಗೆವ್ ಒತ್ತಾಯಿಸಿದ್ದಾರೆ. ಕಾರ್ಖಾನೆ ಬಳಿ ಬಿಗಿ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿದೆ.

ಚರಣ್ ಕುಮಾರ್, ಶ್ರೇಯ ಏಜೆನ್ಸಿಯಡಿ ಗುತ್ತಿಗೆ ಆಧಾರದಲ್ಲಿ ಮೈಶುಗರ್ ಕಾರ್ಖಾನೆಯಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದ. ಸೆಪ್ಟೆಂಬರ್ 3ರಂದು ಕಾರ್ಖಾನೆಯಲ್ಲಿ ಬಾಯ್ಲರ್‌ಗೆ ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾರ್ಮಿಕ ಕೊನೆಯುಸಿರೆಳೆದಿದ್ದಾನೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular