BIG NEWS: ರಾಷ್ಟ್ರ ರಾಜಧಾನಿಯಲ್ಲಿ ದುರಂತ: ಏರ್ ಪೋರ್ಟ್ ಮೇಲ್ಛಾವಣಿ ಕುಸಿದು ವ್ಯಕ್ತಿ ದುರ್ಮರಣ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದುರಂತವೊಂದು ಸಂಭವಿಸಿದೆ. ಏರ್ ಪೋರ್ಟ್ ಮೇಲ್ಛಾವಣಿ ಕುಸಿದು ಬಿದ್ದು ಓರ್ವ ಸಾವನ್ನಪ್ಪಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದೆಹಲಿಯಲ್ಲಿ ತಡರಾರಿಯಿಂದ ಭಾರಿ ಮಳೆಯಾಗುತ್ತಿದ್ದು, ಇಂದು ಮುಂಜಾನೆ ದೆಹಲಿ ಏರ್ ಪೋರ್ಟ್ ನಲ್ಲಿ ಅವಘಡವೊಂದು ಸಂಭವಿಸಿದೆ. ಏರ್ ಪೋರ್ಟ್ ನ ಟರ್ಮಿನಲ್ 1ರಲ್ಲಿ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಗಾಯಾಳುಗಳಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 6 ಜನ ಗಂಭೀರ ಗಾಯಾಳುಗಳಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಮೇಲ್ಛಾವಣಿ ಕುಸಿದ ಹಿನ್ನೆಲೆಯಲ್ಲಿ ಹಲವು ಟ್ಯಾಕ್ಸಿಗಳು ಜಖಂಗೊಂಡಿವೆ. ಟರ್ಮಿನಲ್ 1ರ ಎಲ್ಲಾ ನಿರ್ಗಮನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸುರಕ್ಷತಾ ಕ್ರಮವಾಗಿ ಚೆಕ್-ಇನ್ ಕೌಂಟರ್ ಮುಚ್ಚಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read