HomeLatest Newsಬಿರುಗಾಳಿ ಸಹಿತ ಭಾರಿ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಗಳು ಉಪಕರಣಗಳು ಡಿಕ್ಕಿ: ಮೂರು ಏರ್...

ಬಿರುಗಾಳಿ ಸಹಿತ ಭಾರಿ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಗಳು ಉಪಕರಣಗಳು ಡಿಕ್ಕಿ: ಮೂರು ಏರ್ ಇಂಡಿಯಾ ವಿಮಾನಗಳು ಜಖಂ

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಕಾಏಕಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಮೂರು ಏರ್ ಇಂಡಿಯಾ ವಿಮಾನಗಳು ಹಾನಿಯಾಗಿವೆ.

ಬಿರುಗಾಳಿ ಹೊಡೆತಕ್ಕೆ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿಯಾದ ಪರಿಣಾಮ ಏರ್ ಇಂಡಿಯಾ ಸಂಸ್ಥೆಯ ಮೂರು ವಿಮಾನಗಳು ಜಖಂಗೊಂಡಿವೆ ಎಂದು ತಿಳಿದುಬಂದಿದೆ.

ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿ ಹೊಡೆದಿವೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಳಿಕ ಜಖಂಗೊಂಡಿರುವ ಮೂರೂ J320 (ವಿಮಾನ ಸಂಖ್ಯೆ) ಮಾದರಿಯ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ವಿಮಾನಗಳ ರಿಪೇರಿ ಕೆಲಸ ನಡೆಯುತ್ತಿದೆ. ಇವುಗಳಲ್ಲಿ ಎರಡು ವಿಮಾನಗಳು ಕೆಲವೇ ದಿನಗಳಲ್ಲಿ ಪುನಃ ಹಾರಾಟಕ್ಕೆ ಸಿದ್ಧವಾಗಲಿವೆ. ಆದರೆ ಮತ್ತೊಂದು ವಿಮಾನ ತೀವ್ರ ಹಾನಿಗೊಳಗಾಗಿರುವುದರಿಂದ ಅದರ ರಿಪೇರಿಗೆ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಏರ್ ಟ್ರಾಫಿಕ್ ಕಂಟ್ರೋಲ್‌ನಿಂದ ಹವಾಮಾನ ವೈಪರೀತ್ಯದ ಬಗ್ಗೆ ಯಾವುದೇ ಮುನ್ಸೂಚನೆ ಸಿಗದೇ ಇದ್ದುದರಿಂದ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಆದ್ದರಿಂದ ಘಟನೆ ಸಂಭವಿಸಿದೆ ಎಂದು ವಿಮಾನ ನಿಲ್ದಾಣದ ಆಡಳಿತ ಮಂಡಳಿ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular