HomeLatest NewsBIG NEWS: ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ: ಮಗು ಸೇರಿ...

BIG NEWS: ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ: ಮಗು ಸೇರಿ 8 ಜನರ ರಕ್ಷಣೆ

ನವದೆಹಲಿ: ದೆಹಲಿಯ ಸೀಲಾಮ್ ಪುರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಜನತಾ ಮಜ್ದೂರ್ ಕಾಲೋನಿಯಲ್ಲಿ ಈ ದುರಂತ ಸಂಭವಿಸಿದೆ. 14 ತಿಂಗಳ ಮಗು ಸೇರಿ 8 ಜನರನ್ನು ಈಗಾಗಲೇ ರಕ್ಷಿಸಲಾಗಿದೆ. ಅವಶೇಷಗಳ ಅಡಿಯಲ್ಲಿ ಅಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದೆ.

ಅಗ್ನಿಶಾಮಕ ಸಿಬ್ಬಂದಿಗಳು, ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ತಂಡ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಅವಶೇಷಗಳ ತೆರವು ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ದೆಹಲಿಯಲ್ಲಿ ಕಳೆದ ಒಂದು ವಾರದಲ್ಲಿ ಎರಡು ಕಟ್ಟಡ ಕುಸಿತ ಘಟನೆ ನಡೆದಿದ್ದು, ಇಂದು ನಾಲ್ಕು ಅಂತಸ್ತಿನ ಕಟ್ಟಡ ಕುಶಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular