ದೆಹಲಿಯಲ್ಲಿ ಏಕಾಏಕಿ ಕುಸಿದು ಬಿದ್ದ ಕಟ್ಟಡ: ಭಯಾನಕ ವಿಡಿಯೋ ವೈರಲ್​

ನವದೆಹಲಿ: ರಾಷ್ಟ್ರ ರಾಜಧಾನಿಯ ಭಜನ್‌ಪುರ ಪ್ರದೇಶದಲ್ಲಿ ಕಟ್ಟಡವೊಂದು ಬುಧವಾರ ಕುಸಿದು ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕುಸಿತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಟ್ಟಡ ಕುಸಿದು ಬಿದ್ದಿರುವ ನೋಟವು ಸಿಸಿ ಟಿವಿಯಲ್ಲಿ ದಾಖಲಾಗಿದ್ದು, ಅದರ ಭಯಾನಕ ವಿಡಿಯೋ ವೈರಲ್​ ಆಗಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಅಗ್ನಿಶಾಮಕ ದಳಕ್ಕೆ ಮಧ್ಯಾಹ್ನ 3:05 ಕ್ಕೆ ಮಾಹಿತಿ ಬಂದಿತು. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಇದಕ್ಕೂ ಮುನ್ನ ಮಾರ್ಚ್ 1 ರಂದು ಉತ್ತರ ದೆಹಲಿಯ ರೋಶನಾರಾ ರಸ್ತೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

https://twitter.com/ANI/status/1633427148353466376?ref_src=twsrc%5Etfw%7Ctwcamp%5Etweetembed%7Ctwterm%5E1633427148353466376%7Ctwgr%5Eef8446cb259375d43178d270997f5f0aba3e43a2%7Ctwcon%5Es1_&ref_url=https%3A%2F%2Fwww.freepressjournal.in%2Fdelhi%2Fdelhi-building-collapses-in-bhajanpura-watch-shocking-video

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read