ನವದೆಹಲಿ: ದೆಹಲಿಯಲ್ಲಿ ಸಂಭವಿಸಿದ ಕಾರು ಸ್ಫೋಟ ಘಟನೆಯಲ್ಲಿ ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಇತ್ತೀಚಿನ ಮಾಹಿತಿ ಪ್ರಕಾರ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ನಿನ್ನೆ ಸಂಜೆ i20 ಕಾರು ಏಕಾಏಕಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಹಲವರ ದೇಹ ಛಿದ್ರ ಛಿದ್ರವಾಗಿತ್ತು. ಇದೀಗ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ೬ ಜನರ ಗುರುತನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಸ್ಫೋಟದ ಹಿಂದೆ ಉಗ್ರರ ಕೈವಾಡ ಶಂಕೆ ವ್ಯಕ್ತವಾಗಿದ್ದು, ದೆಹಲಿಯ ಕೊತ್ವಾಲ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
