ನವದೆಹಲಿ: ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದಬಳಿ ಸಂಭವಿಸಿದ್ದ ಕಾರ್ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದರವ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ನವೆಂಬರ್ 10ರಂದು ಸಂಜೆ ದೆಹಲಿಯ ಕೆಂಪುಕೋಟೆ ಬಳಿ i20 ಕಾರ್ ಬಾಂಬ್ ಸ್ಫೋಟಗೊಂಡಿದ್ದು, ದುರಂತದಲ್ಲಿ 13 ಜನರು ಮೃತಪಟ್ಟಿದ್ದರು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಗಾಯಾಳುಗಳಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಮಧ್ಯೆ ಚಿಕಿತ್ಸೆ ಪದೆಯುತ್ತಿದ್ದ ಮತ್ತೋರ್ವ ಗಾಯಾಳು ಸಾವನ್ನಪ್ಪಿದ್ದು, ದೆಹಲಿ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 30 ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.
