ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ಸಂಚುಕೋರ ಬಿಲಾಲ್ ವಾನಿಯನ್ನು ಎನ್ ಐಎ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ಹೊರಡಿಸಿದೆ.
ದೆಹಲಿ ಸ್ಫೋಟದ ರೂವಾರಿ ಡಾ.ಉಮರ್ ನಬಿಯ ಸಹಚರನಾಗಿರುವ ಬಿಲಾಲ್ ವಾನಿಯನ್ನು ಇಂದು ಎನ್ ಐಎ ಅಧಿಕಾರಿಗಳು ದೆಹಲಿಯ ಪಟಿಯಾಲಾ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸ್ದ ಕೋರ್ಟ್, ಬಿಲಾಲ್ ವಾನಿಯನ್ನು ಹತ್ತು ದಿನಗಳ ಕಾಲ ಎನ್ ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ನ.10ರಂದು ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಕಾರ್ ಬಾಂಬ್ ಸ್ಫೋಟಗೊಂಡಿದ್ದು, ದುರಂತದಲ್ಲಿ 15 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕೃತ್ಯದ ಹಿಂದೆ ವೈಟ್ ಕಾಲರ್ ಉಗ್ರರ ಕೈವಾಡವಿರುದು ದೃಢಪಟ್ಟಿದೆ. ಈ ನಿಟ್ಟಿನಲ್ಲಿ ಎನ್ ಐಎ ತನಿಖೆ ಚುರುಕುಗೊಳಿಸಿದೆ.
