ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ ಹಿನ್ನೆಲೆಯಲ್ಲಿ ಕೆಂಪುಕೋಟೆ ಬಳಿಯ ಲಾಲ್ ಕಿಲಾ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ.
ಕೆಂಪು ಕೋಟೆ ಬಳಿ ಮೆಟ್ರೋ ನಿಲ್ದಾಣವನ್ನು ಮುಚ್ಚಲಾಗಿದ್ದು, ಈ ಭಾಗದಲ್ಲಿ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ದೆಹಲಿ ಮೆಟ್ರೋ ನಿಗಮ ಲಾಲ್ ಕಿಲಾ ಮೆಟ್ರೋ ನಿಲ್ದಾಣವನ್ನು ಭದ್ರತಾ ಕಾರಣಗಳಿಂದ ಮುಚ್ಚಲಾಗಿದೆ. ಉಳಿದ ಎಲ್ಲಾ ನಿಲ್ದಾಣಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದೆ.
ನೇತಾಜಿ ಸುಭಾಷ್ ಮಾರ್ಗ್ ಛಟ್ಟಾ ರೈಲ್ ಕಟ್ ನಿಂದ ಸುಭಾಷ್ ಮಾರ್ಗ್ ಕಟ್ ವರೆಗಿನ ವಾಹನ ರಸ್ತೆ ಹಾಗೂ ಸರ್ವಿಸ್ ರಸ್ತೆಯಲ್ಲಿ ಸಂಚಾರ ನಿಯಂತ್ರಣ ಹಾಗೂ ಕೆಲವೊಂದು ಮಾರ್ಗ ಬದಲಾವಣೆ ಮಾಡಲಾಗಿರುವ ಬಗ್ಗೆ ದೆಹಲಿ ಸಂಚಾರ ಪೊಲೀಸರು ಸಲಹಾ ಟಿಪ್ಪಣಿ ಬಿಡುಗಡೆ ಮಾಡಿದ್ದಾರೆ. ನೇತಾಜಿ ಸುಭಾಷ್ ಮಾರ್ಗ್ ಛಟ್ಟಾ ರೈಲ್ ಕಟ್ ನಿಂದ ಸುಭಾಷ್ ಮಾರ್ಗ್ ಕಟ್ ವರೆಗೆ ಯಾವುದೇ ವಾಹನಗಳಿಗೆ ಪ್ರವೇಶವಿಲ್ಲ ಎಂದು ತಿಳಿಸಿದ್ದಾರೆ.
