HomeLatest NewsBIG NEWS: ದೆಹಲಿ ಕಾರು ಸ್ಫೋಟ ಪ್ರಕರಣಕ್ಕೆ ಪುಲ್ವಾಮಾ ನಂಟು: ಉಗ್ರರ ಕೈವಾಡ ಶಂಕೆ

BIG NEWS: ದೆಹಲಿ ಕಾರು ಸ್ಫೋಟ ಪ್ರಕರಣಕ್ಕೆ ಪುಲ್ವಾಮಾ ನಂಟು: ಉಗ್ರರ ಕೈವಾಡ ಶಂಕೆ

ನವದೆಹಲಿ: ದೇಶವನ್ನೇ ಬಿಚ್ಚಿ ಬೀಳಿಸಿರುವ ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಾರು ಸ್ಫೋಟ ಪ್ರಕರಣದಲ್ಲಿ ಪುಲ್ವಾಮಾ ನಂಟಿರುವ ಬಗ್ಗೆ ತಿಳಿದುಬಂದಿದೆ. ಅಲ್ಲದೇ ಇದೊಂದು ಭಯೋತ್ಪಾದಕ ಕೃತ್ಯ ಎಂದು ಶಂಕೆ ವ್ಯಕ್ತವಾಗಿದೆ.

ಸ್ಫೋಟಗೊಂಡ HR 26 CE 7674 ನೋಂದಣಿಯ i20 ಕಾರು ಮೊಹಮ್ಮದ್ ಸಲ್ಮಾನ್ ಎಂಬುವವರ ಹೆಸರಿನಲ್ಲಿ ಹರಿಯಾಣದಲ್ಲಿ ನೋಂದಣಿಯಾಗಿತ್ತು. ಗುರುಗ್ರಾಮದ ಶಾಂತಿನಗರ ನಿವಾಸಿ ಸಲ್ಮಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರು ಕಾರನ್ನು ಒಂದೂವರೆ ವರ್ಷದ ಹಿಂದೆ ದೆಹಲಿಯ ಓಕ್ಲಾ ನಿವಾಸಿ ದೇವೇಂದರ್ ಅವರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ. ತನಿಖೆ ನಡೆಸಿದ ಪೊಲೀಸರಿಗೆ, ದೇವೇಂದರ್ ಕೂಡ ಕಾರನ್ನು ಜಮ್ಮು-ಕಾಶ್ಮೀರದ ಪುಲ್ವಾಮಾ ಮೂಲದ ತಾರೀಕ್ ಎಂಬ ವ್ಯಕ್ತಿಗೆ ಮಾರಾಟ ಮಾಡಿರುವುದು ಗೊತ್ತಾಗಿದೆ. ಈ ಬೆಳವಣಿಗೆಯು ಪ್ರಕರಣಕ್ಕೆ ಪುಲ್ವಾಮಾ ನಂಟನ್ನು ಸೂಚಿಸಿದ್ದು, ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ಉಗ್ರರ ಕೈವಾಡದ ಬಗ್ಗೆ ಶಂಕೆ ವ್ಯಕ್ತವಾಗಿದೆ. ದೆಹಲಿ ಪೊಲೀಸರು ತಾರಿಕ್ ಜಾಡು ಹಿಡಿದು ಪುಲ್ವಾಮಾಗೆ ತೆರಳಿದ್ದು, ಸದ್ಯ ಪ್ರಕರಣ ಸಂಬಂಧ ಸಲ್ಮಾನ್ ಹಾಗೂ ದೇವೇಂದರ್ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತಾರಿಕ್ ಬಗ್ಗೆ ಶೋಧ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular