ನವದೆಹಲಿ: ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟ ಪ್ರಕರಣದಲ್ಲಿ 9 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ.
ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆ ಕಾಯ್ದೆ ಹಾಗೂ ಸ್ಫೋಟಕ ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಿದ್ದಾರೆ. ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ, ಯುಎಪಿಎ ಹಾಗೂ ಸ್ಫೋಟಕ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ಯುಎಪಿಎ ಸೆಕ್ಷನ್ 16 ಹಾಗೂ 18 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸೆಕ್ಷನ್ ಗಳು ಭಯೋತ್ಪಾದಕ ದಾಳಿಗೆ ಸಂಚು ಹಾಗೂ ಅವುಗಳಿಗೆ ಶಿಕ್ಷೆ ಸಂಬಂಧಿಸಿದ್ದಾಗಿದೆ.
ಘಟನೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯ ಏರ್ ಪೋರ್ಟ್, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣ, ಜನನಿಬಿಡ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
