ಕೇಂದ್ರದ ವಿರುದ್ಧ ದಿಲ್ಲಿ ಚಲೋ : ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಬಿಜಪಿ ಸಂಸದರಿಗೆ ಸಿಎಂ ಪತ್ರ

ಬೆಂಗಳೂರು : ತೆರಿಗೆ ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಳೆ ದೆಹಲಿಯಲ್ಲಿ ಪ್ರತಿಭಟನೆ ನಡೆಯಲಿದೆ.

ಪ್ರತಿಭಟನೆಗೆ ಭಾಗಿಯಾಗುವಂತೆ  ಬಿಜೆಪಿ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರದ ವಿತ್ತ ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು, ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು, ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ ದೇವೇಗೌಡರು, ಕರ್ನಾಟಕದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಪ್ರಲ್ಹಾದ್ ಜೋಷಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಸದಾನಂದ ಗೌಡ ಅವರು ಸೇರಿದಂತೆ ದೆಹಲಿಯಲ್ಲಿ ನಾಡನ್ನು ಪ್ರತಿನಿಧಿಸುತ್ತಿರುವ ಎಲ್ಲಾ ಗೌರವಾನ್ವಿತರಿಗೆ ನಾಳೆ ನಡೆಯಲಿರುವ ಚಲೋ ದಿಲ್ಲಿಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿ ಪತ್ರ ಬರೆದಿದ್ದಾರೆ.

ಇದು ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ನಾಡಿಗೆ ಆಗುತ್ತಿರುವ ಅನ್ಯಾಯ, ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿನ ತಾರತಮ್ಯದ ವಿರುದ್ಧದ ಹೋರಾಟ. ಕರ್ನಾಟಕದ ಭವಿಷ್ಯಕ್ಕಾಗಿ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ನಾಳೆ ಬೆಳಿಗ್ಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ದೆಹಲಿ ಸರ್ಕಾರಕ್ಕೆ ತಲುಪಿಸಿ, ನ್ಯಾಯ ಕೇಳುವುದು ನಮ್ಮೆಲ್ಲರ ಕರ್ತವ್ಯ. ತಾವೆಲ್ಲರೂ ಪಕ್ಷಬೇಧ ಮರೆತು ಕರ್ನಾಟಕದ ಹಿತಕ್ಕಾಗಿ ನಮ್ಮ ಧ್ವನಿಗೆ ಧ್ವನಿಗೂಡಿಸುತ್ತೀರ ಎಂದು ನಂಬಿದ್ದೇನೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read