BREAKING: ಸರ್ಕಾರಿ ಬಸ್ ಗಳಲ್ಲಿ ತೃತೀಯ ಲಿಂಗಿಗಳಿಗೆ ಉಚಿತ ಪ್ರಯಾಣ: ದೆಹಲಿ ಸಿಎಂ ಘೋಷಣೆ

ನವದೆಹಲಿ: ಸರ್ಕಾರಿ ಬಸ್ ಗಳಲ್ಲಿ ಟ್ರಾನ್ಸ್ ಜೆಂಡರ್ ಸಮುದಾಯದವರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ

ದೆಹಲಿ ಸರ್ಕಾರವು ಟ್ರಾನ್ಸ್ಜೆಂಡರ್ ಸಮುದಾಯವು ಎದುರಿಸುತ್ತಿರುವ ಸಾಮಾಜಿಕ ನಿರ್ಲಕ್ಷ್ಯ ಪರಿಹರಿಸಲು ತನ್ನ ಬದ್ಧತೆ ವ್ಯಕ್ತಪಡಿಸಿದೆ. ಎಲ್ಲರಿಗೂ ಸಮಾನ ಹಕ್ಕುಗಳಿಗೆ ಒತ್ತು ನೀಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಬಸ್‌ಗಳಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಸರ್ಕಾರ ಉಚಿತ ಪ್ರಯಾಣವನ್ನು ಪರಿಚಯಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಪ್ರಸ್ತಾವನೆಯನ್ನು ಶೀಘ್ರದಲ್ಲೇ ಸಂಪುಟ ಅಂಗೀಕರಿಸುವ ನಿರೀಕ್ಷೆಯಿದೆ, ಈ ನಿರ್ಧಾರವು ತೃತೀಯ ಲಿಂಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂಬ ಭರವಸೆ ಇದೆ ಎಂದು ಸಿಎಂ ಮಾಹಿತಿ ನೀಡಿದರು.

ನಮ್ಮ ಸಾಮಾಜಿಕ ಪರಿಸರದಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯವನ್ನು ಹೆಚ್ಚಾಗಿ ನಿರ್ಲಕ್ಷಿಸಲಾಗಿದೆ. ಅವರು ಕೂಡ ಮನುಷ್ಯರು ಮತ್ತು ಅವರಿಗೂ ಸಮಾನ ಹಕ್ಕುಗಳಿವೆ. ಈಗ ಅವರಿಗೂ ದೆಹಲಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣ ಉಚಿತ ವಾಗಿರುತ್ತದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read