HomeIndiaಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ 3ನೇ ಬಾರಿಗೆ ಇಡಿ ಸಮನ್ಸ್

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ 3ನೇ ಬಾರಿಗೆ ಇಡಿ ಸಮನ್ಸ್

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜನವರಿ 3 ರಂದು ವಿಚಾರಣೆಗೆ ಹಾಜರಾಗುವಂತೆ ಮೂರನೇ ಬಾರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ನೀಡಿದೆ.

ಮದ್ಯದ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಸತತ ಮೂರನೇ ಬಾರಿಗೆ ಸಮನ್ಸ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಡಿ ನೀಡಿರುವ ಹೊಸ ಸಮನ್ಸ್‌ ಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರು, ಇಡೀ ಪ್ರಕರಣವು ನಕಲಿ. ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್ ಅವರನ್ನು ಬಲೆಗೆ ಬೀಳಿಸಲು ಸಂಪೂರ್ಣ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ, ಡಿಸೆಂಬರ್ 21 ರಂದು ಹಾಜರಾಗಲು ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್‌ ನೀಡಲಾಗಿತ್ತು. ಅವರು ವಿಚಾರಣೆಗೆ ಹಾಜರಾಗಲಿಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular